12:13 PM Monday 10 - November 2025

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್‌. ಆಯ್ಕೆ

pushpa raj b n
10/11/2025

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್‌.(Pushparaj B.N.) ಅವರು ಆಯ್ಕೆಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ವಾರ್ತಾ ಇಲಾಖೆ ಸಭಾಂಗಣದಲ್ಲಿ ಭಾನುವಾರ ಚುನಾವಣೆ ನಡೆದಿದ್ದು, ಪುಷ್ಪರಾಜ್ ಬಿ.ಎನ್‌. ಅವರು 187 ಮತಗಳನ್ನು ಪಡೆದು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದರು. ಪ್ರತಿಸ್ಫರ್ಧಿ ಶ್ರವಣ್ ಕುಮಾರ್ ನಾಳ 144 ಮತಗಳನ್ನು ಪಡೆದರು.

ಪುಷ್ಪರಾಜ್ ಬಿ.ಎನ್‌.


ರಾಜ್ಯ ಕಾರ್ಯಕಾರಣಿ ಸಮಿತಿಯ ಸದಸ್ಯರಾಗಿ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ ನಾಯಕ್ ಆಯ್ಕೆಯಾದರು. ಶ್ರೀನಿವಾಸ ನಾಯಕ್ 204 ಮತ ಪಡೆದರೆ, ಅವರ ಪ್ರತಿಸ್ಪರ್ಧಿ ಅನ್ಸಾರ್ ಇನೋಳಿ 124 ಮತಗಳನ್ನು ಗಳಿಸಿದರು.  ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಪೂಜಾರಿ ಮತ್ತು ಕೋಶಾಧಿಕಾರಿಯಾಗಿ ವಿಜಯ ಕೋಟ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮುಹಮ್ಮದ್ ಆರೀಫ್, ವಿಲೈಡ್ ಡಿ ಸೋಜ ಮತ್ತು ರಾಜೇಶ್ ಶೆಟ್ಟಿ, ಕಾರ್ಯದರ್ಶಿಗಳಾಗಿ ಸತೀಶ್ ಇರಾ, ಸಿದ್ದೀಕ್ ನೀರಾಜೆ, ಸುರೇಶ್ ಪಳ್ಳಿ ಗೆಲುವು ಸಾಧಿಸಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಶೋಕ್ ಶೆಟ್ಟಿ ಬಿ.ಎನ್, ಸಂದೇಶ್ ಜಾರ, ಸಂದೀಪ್ ಕುಮಾರ್ ಎಂ, ಲಕ್ಷ್ಮೀನಾರಾಯಣ ರಾವ್, ಹರೀಶ್ ಮೋಟುಕಾನ, ದಿವಾಕರ ಪದ್ಮುಂಜ, ಕಿರಣ್ ಯು. ಸಿರ್ಸಿಕರ್, ಅಭಿಷೇಕ್ ಎಚ್‌.ಎಸ್., ಜಯಶ್ರೀ, ಭುವನೇಶ್ವರ ಜಿ, ಸಂದೀಪ್ ವಾಗ್ಗೆ ಹರೀಶ್ ಕೆ.ಆದೂರ್, ಗಿರೀಶ್ ಅಡ್ಡಂಗಾಯ, ಸಂದೀಪ್ ಸಾಲ್ಯಾನ್, ಆರಿಫ್ ಕಲ್ಕಟ್ಟ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿಗೆ ಒಟ್ಟು 21 ಮಂದಿ ಸ್ಪರ್ಧಿಸಿದ್ದರು.

ಅಧ್ಯಕ್ಷರಾಗಿ ಸೇರಿದಂತೆ ಚುನಾವಣೆಯಲ್ಲಿ ಆಯ್ಕೆಯಾದ ಎಲ್ಲ ಪದಾಧಿಕಾರಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಹಾಗೂ ಚುನಾವಣಾಧಿಕಾರಿಯಾಗಿದ್ದ ಖಾದರ್ ಷಾ ಪ್ರಮಾಣ ಪತ್ರವನ್ನು ವಿತರಿಸಿ, ಅಭಿನಂದಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version