ಪುತ್ರಿಯ ಮೇಲೆ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಹತ್ಯೆಗೈದ ಪಾಪಿ ತಂದೆ!

thane
16/07/2022

ಮಹಾರಾಷ್ಟ್ರದ ಥಾಣೆಯಲ್ಲಿ 10 ವರ್ಷದ ಬಾಲಕಿಯನ್ನು ಆಕೆಯ ತಂದೆಯೇ ಅತ್ಯಾಚಾರ ಮಾಡಿ ಕತ್ತು ಹಿಸುಕಿ ಕೊಲೆಮಾಡಿದ ದಾರುಣ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ 34 ವರ್ಷದ ತಂದೆಯನ್ನು ಭಿವಂಡಿ ಟೌನ್ ಪೊಲೀಸರು ಬಂಧಿಸಿದ್ದಾರೆ.

ಅತ್ಯಾಚಾರದ ಬಳಿಕ ಸಿಕ್ಕಿಬೀಳುವ ಭಯದಿಂದ ಮಗಳನ್ನು ಕೊಂದಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ. ಥಾಣೆ ಜಿಲ್ಲೆಯ ಭಿವಂಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.  ತಂದೆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ನಂತರ ಬಟ್ಟೆಯಿಂದ ಕತ್ತು ಹಿಸುಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.  ಖಚಿತ ಮಾಹಿತಿ ಪಡೆದ ಪೊಲೀಸರು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

ಐಪಿಸಿ ಸೆಕ್ಷನ್ 376 (ಅತ್ಯಾಚಾರ), 302 (ಕೊಲೆ) ಮತ್ತು ಪೋಕ್ಸೋ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.  ನ್ಯಾಯಾಲಯ ಆರೋಪಿಯನ್ನು ಜುಲೈ 22ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version