10:32 PM Wednesday 17 - September 2025

ಡೆಪ್ಯುಟಿ ಸ್ಪೀಕರ್ ಬೇಡವೆಂದಿದ್ದ ಪುಟ್ಟರಂಗಶೆಟ್ಟಿ ಯೂ ಟರ್ನ್!

puttaranga
08/06/2023

ಕಾಂಗ್ರೆಸ್ ಸರ್ಕಾರದ ಸಂಪುಟ ರಚನೆ ವೇಳೆ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿಗೆ ಡೆಪ್ಯುಟಿ ಸ್ಪೀಕರ್ ಸ್ಥಾನ ನೀಡಲಾಗಿತ್ತು.ಈ ವೇಳೆ ನಂಗೆ ನಿಭಾಯಿಸಲು ಕಷ್ಟವಾಗುತ್ತೆ,ಡೆಪ್ಯುಟಿ ಸ್ಪೀಕರ್ ಸ್ಥಾನ ಒಪ್ಪಿಕೊಳ್ಳಲ್ಲ ಅಂತಾ ಪುಟ್ಟರಂಗಶೆಟ್ಟಿ ತಿಳಿಸಿದ್ದರು.

ಆದ್ರೆ ಇದೀಗ ಚಾಮರಾಜನಗರದಲ್ಲಿ ಮಾತನಾಡಿದ ಶಾಸಕ ಪುಟ್ಟರಂಗಶೆಟ್ಟಿ ಯೂ ಟರ್ನ್ ಹೊಡೆದಿದ್ದು ನಾನು ಡೆಪ್ಯುಟಿ ಸ್ಪೀಕರ್ ಸ್ಥಾನ ಒಪ್ಪೊಕೊಂಡಿದ್ದೇನೆ ಎಂದಿದ್ದಾರೆ.

ಒಂದು ವರ್ಷದ ನಂತರ ಕಾಂಗ್ರೆಸ್ ವರಿಷ್ಠರು ಸಚಿವ ಸ್ಥಾನ ಕೊಡುವ ಬಗ್ಗೆ ಮಾತು ಕೊಟ್ಟಿದ್ದಾರೆ. ಹಾಗಾಗಿ ಡೆಪ್ಯುಟಿ ಸ್ಪೀಕರ್ ಸ್ಥಾನ ಒಪ್ಪಿಕೊಂಡಿದ್ದೇನೆ. ನಾನು ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿದ್ದು, ವರಿಷ್ಠರು ಹೇಳಿದ್ದನ್ನ ಒಪ್ಪೊಕೊಳ್ಳಲೇ ಬೇಕು. ಸಚಿವ ಸ್ಥಾನ ತಪ್ಪಿದ್ದರಿಂದ ಬೇಸರವಾದರು ಹೇಳಿಕೊಳ್ಳಲೂ ಆಗಲ್ಲ. ಹೈಕಮಾಂಡ್ ಕೊಟ್ಟ ಜವಾಬ್ದಾರಿ ನಿಭಾಯಿಸ್ತೇನೆ. ಒಂದು ವರ್ಷ ಕೆಲಸ ಮಾಡು ನಂತರ ಸಚಿವ ಸ್ಥಾನ ನೀಡ್ತೆನೆಂದು ಸಿಎಂ ಸಿದ್ದರಾಮಯ್ಯ ಕೂಡ ತಿಳಿಸಿದ್ದಾರೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version