ಪುತ್ತೂರು: ದರ್ಬೆ ಗಲಾಟೆ– ಕರ್ತವ್ಯಕ್ಕೆ ಅಡ್ಡಿ ಪ್ರಕರಣ: 10 ಮಂದಿ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು
ಪುತ್ತೂರು: ನಗರದ ದರ್ಬೆಯಲ್ಲಿ ಕೆಲ ದಿನಗಳ ಹಿಂದೆ ನಡೆದ ಗಲಾಟೆ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, 10 ಮಂದಿ ಆರೋಪಿಗಳಿಗೆ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ದರ್ಬೆಯ ಜೆರಾಕ್ಸ್ ಅಂಗಡಿಯೊಂದರಲ್ಲಿ ಲ್ಯಾಮಿನೇಷನ್ ಮಾಡಲು ನೀಡಿದ್ದ ದಾಖಲೆ ಪತ್ರಕ್ಕೆ ಹಾನಿಯಾದ ವಿಚಾರವಾಗಿ ಗ್ರಾಹಕರು ಹಾಗೂ ಅಂಗಡಿ ಮಾಲೀಕರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಗಲಾಟೆ ವಿಕೋಪಕ್ಕೆ ತಿರುಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಒಡ್ಡಲಾಗಿದೆ ಎಂಬ ಆರೋಪದ ಮೇಲೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.
ಈ ಪ್ರಕರಣದಲ್ಲಿ ಅಬ್ದುಲ್ ನಿಯಾಝ್ ಪೆರ್ನೆ, ಮುಹಮ್ಮದ್ ನೌಷಾದ್ ತಾರಿಗುಡ್ಡೆ, ಆದಂ ಕೋಡ್ಲೈ, ಮುಹಮ್ಮದ್ ಸುಹೈಲ್ ಬಿ. ಭಕ್ತಕೋಡಿ, ಅಬ್ದುಲ್ ಖಾದರ್ ಜಾಬಿರ್ ಬನ್ನೂರು, ಅಬ್ದುಲ್ ಕರೀಂ ಒಳಮೊಗ್ರು ಕುಂಬ್ರ, ಯಾಕೂಬ್ ಅಂಗಡಿಮಜಲು, ಇಮ್ರಾನ್ ಅಹ್ಮದ್ ಅಲಂಗುರಡ್ಕ, ಮುಹಮ್ಮದ್ ರಿಫಾಝ್ ಕೂರ್ನಡ್ಕ ಹಾಗೂ ಮುಹಮ್ಮದ್ ಇರ್ಷಾದ್ ಜೆ. ಜಾರತ್ತಾರ್ ಎಂಬವರು ನಿರೀಕ್ಷಣಾ ಜಾಮೀನು ಕೋರಿ ಪುತ್ತೂರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ್ ಅವರು ಎಲ್ಲ 10 ಮಂದಿ ಆರೋಪಿಗಳಿಗೂ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ. ಆರೋಪಿಗಳ ಪರವಾಗಿ ವಕೀಲ ಅಬ್ದುಲ್ ರಹ್ಮಾನ್ ಹಿರೇಬಂಡಾಡಿ ವಾದ ಮಂಡಿಸಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























