ಪುತ್ತೂರು: ಆಟೋ ರಿಕ್ಷಾದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ; ಚಾಲಕ ಪೊಲೀಸ್ ವಶಕ್ಕೆ - Mahanayaka
3:18 AM Friday 11 - September 2026

ಪುತ್ತೂರು: ಆಟೋ ರಿಕ್ಷಾದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ; ಚಾಲಕ ಪೊಲೀಸ್ ವಶಕ್ಕೆ

auto
10/09/2026

ಪುತ್ತೂರು: ತನ್ನ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದ ಮೇಲೆ ಆಟೋ ರಿಕ್ಷಾ ಚಾಲಕನೊಬ್ಬನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಾಲಕೃಷ್ಣ ವಶಕ್ಕೆ ಪಡೆದಿರುವ ಆರೋಪಿ ಎಂದು ಗುರುತಿಸಲಾಗಿದೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿವಾಸಿಯಾದ ಮಹಿಳೆಯೊಬ್ಬರು ಬುಧವಾರ ಬೆಳಗ್ಗೆ ಕೆಲಸದ ನಿಮಿತ್ತ ಮನೆಯಿಂದ ಹೊರಟಿದ್ದರು. ಈ ವೇಳೆ ಪರಿಚಯಸ್ಥನಾಗಿದ್ದ ಬಾಲಕೃಷ್ಣ ಎಂಬಾತನ ಆಟೋ ರಿಕ್ಷಾವನ್ನು ಹತ್ತಿದ್ದರು.

ಪುತ್ತೂರು ಕಡೆಗೆ ತೆರಳುವಂತೆ ಸೂಚಿಸಿದ್ದರೂ, ಆರೋಪಿ ಬಾಲಕೃಷ್ಣ ಉದ್ದೇಶಪೂರ್ವಕವಾಗಿ ನಿಗದಿತ ರಸ್ತೆಯನ್ನು ಬದಲಾಯಿಸಿದ್ದಾನೆ. ಬಳಿಕ ರಿಕ್ಷಾವನ್ನು ಕುರಿಯ ಎಂಬಲ್ಲಿಗೆ ಕೊಂಡೊಯ್ದು ನಿರ್ಜನ ಸ್ಥಳದಲ್ಲಿ ನಿಲ್ಲಿಸಿ, ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಸಂತ್ರಸ್ತೆ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಕೂಡಲೇ ಕಾರ್ಯಪ್ರವೃತ್ತರಾದ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತಕ್ಷಣವೇ ಆರೋಪಿ ಬಾಲಕೃಷ್ಣನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler