ಕ್ಷಿಪ್ರ ಕಾರ್ಯಾಚರಣೆ: ಕೊಲೆ ಆರೋಪಿಯನ್ನು ಕೇವಲ 2 ಗಂಟೆಗಳೊಳಗೆ ಬಂಧಿಸಿದ ಪೊಲೀಸರು!

ಬೆಂಗಳೂರು ಪಶ್ಚಿಮ ವಿಭಾಗ ಕೆಂಗೇರಿ ಅನ್ನಪೂರ್ಣೀಶ್ವರಿನಗರ ಪೊಲೀಸ್ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಎರಡು ಗಂಟೆಯೊಳಗೆ ಕೊಲೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ
ಕಳೆದ 21 ರ ರಾತ್ರಿ ಸುಮಾರು 11:30ಗೆ ಶ್ರೀಗಂಧಕಾವಲಿನ ಆರೋಗ್ಯ ಬಡಾವಣೆಯ 6ನೇ ಎ ಕ್ರಾಸ್ ಮತ್ತು 4ನೇ ಮೈನ್, ಜಂಕ್ಷನ್ ನಲ್ಲಿ ವಿಜಯಕುಮಾರ್ ಎಂಬಾತನು ಮದ್ಯಪಾನ ಮಾಡಲು ಹಣ ಕೊಡಲಿಲ್ಲವೆಂಬ ಉದ್ದೇಶದಿಂದ ಗಿರೀಶ ಮತ್ತು ಲೋಕೇಶ್ ವಿಜಯಕುಮಾರ್ ಎಜಿ ಎಂಬಾತನಿಗೆ ಸಿಮೆಂಟ್ ಹಾಲೋಬ್ಲಾಕ್ ಅನ್ನು ಆತನ ತಲೆಯ ಮೇಲೆ ಎತ್ತಿಹಾಕಿ ಕೊಲೆ ಮಾಡಿರುತ್ತಾರೆ. ಈ ಕುರಿತು ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣ ದಾಖಲಾದ ಎರಡು ಗಂಟೆಯೊಳಗೆ ಸಿ.ಸಿ.ಟಿವಿ ಸಹಾಯದಿಂದ ಆರೋಪಿಗಳ ಮಾಹಿತಿ ಪಡೆದು ದಸ್ತಗಿರಿ ಮಾಡಿ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ.
ಕಾರ್ಯಾಚರಣೆಯಲ್ಲಿ ಬೆಂಗಳೂರು ನಗರದ ಪಶ್ಚಿಮ ವಿಭಾಗದ ಉಪ ಪೊಲೀಸ್ ಕಮೀಷನರ್ ಡಾ:ಲಕ್ಷ್ಮಣ ನಿಂಬರಗಿ, ರವರ ಸೂಕ್ತ ಮಾರ್ಗದರ್ಶನದಲ್ಲಿ, ಕೆಂಗೇರಿ ಉಪ-ವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಹೆಚ್.ಎಸ್.ಪರಮೇಶ್ವರ್ ನಿರ್ದೇಶನದಲ್ಲಿ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರಾಮಮೂರ್ತಿ.ಬಿ ರವರು ಸಿಬ್ಬಂದಿ ಪಾಲ್ಗೊಂಡಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw