ಸ್ವಾಮೀಜಿಯ ಹೆಗಲ ಮೇಲೆ ಕೈ ಹಾಕಿದ ಆರ್.ಅಶೋಕ್! - Mahanayaka

ಸ್ವಾಮೀಜಿಯ ಹೆಗಲ ಮೇಲೆ ಕೈ ಹಾಕಿದ ಆರ್.ಅಶೋಕ್!

kempegowda
12/11/2022

ಬೆಂಗಳೂರು: ಸಚಿವ ಆರ್‌.ಅಶೋಕ್ ಅವರು ನಿರ್ಮಲಾನಂದನಾಥ ಸ್ವಾಮೀಜಿಯ ಹೆಗಲ ಮೇಲೆ ಕೈ ಹಾಕಿದ ಘಟನೆ ನಡೆದಿದ್ದು, ಘಟನೆಯ ವಿರುದ್ಧ ರಾಜ್ಯ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ನಾಯಕರಿಗೆ ಕನಿಷ್ಠ ಸಂಸ್ಕಾರವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಕಂದಾಯ ಸಚಿವ ಆರ್‌.ಅಶೋಕ್ ಅವರು ಸ್ವಾಮೀಜಿಯ ಹೆಗಲ ಮೇಲೆ ಕೈಇಟ್ಟು ನಿಂತ ಫೋಟೊ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್, ಧರ್ಮ, ಸಂಸ್ಕೃತಿ ಕುರಿತು ಮಾತನಾಡುವ ಬಿಜೆಪಿ ನಾಯಕ, ಸಚಿವ ಆರ್‌.ಅಶೋಕ್‌ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿಗಳ ಹೆಗಲ ಮೇಲೆ ಕೈ ಹಾಕಿದ್ದಾರೆ. ಶ್ರೀಗಳು ಹೆಗಲ ಮೇಲೆ ಕೈಹಾಕುವಷ್ಟು ಸದರ ಎನಿಸಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಒಬ್ಬ ಶ್ರೀಗಳ ಹೆಗಲ ಮೇಲೆ ಕೈ ಹಾಕುವ ಕರ್ನಾಟಕ ರಾಜ್ಯ ಬಿಜೆಪಿ ನಾಯಕರಿಗೆ, ಧರ್ಮ, ಸಂಸ್ಕೃತಿ ಬಗ್ಗೆ ಮಾತನಾಡುವ ಬಿಜೆಪಿಗರಿಗೆ ಕನಿಷ್ಠ ಸಂಸ್ಕಾರದ ಜ್ಞಾನವಿಲ್ಲ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ 108ಅಡಿ ಎತ್ತರ ಪ್ರಗತಿ ಪ್ರತಿಮೆ ಅನಾವರಣದ ಬಳಿಕ ಪ್ರತಿಮೆ ಮುಂದೆ ಪ್ರಧಾನಿ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್‌ ಚೆಂದ್ ಗೆಹ್ಲೋತ್, ಸಂಸದ ಮತ್ತು ನಟ ಜಗ್ಗೇಶ, ಸಚಿವರಾದ ಸುಧಾಕರ್, ಆರ್‌.ಅಶೋಕ ಹಾಗೂ ಆದಿಚುಂಚನಗಿರಿ ಮಹಾಸಂಸ್ಥಾನದ ನಿರ್ಮಲಾನಂದನಾಥ ಸ್ವಾಮೀಜಿ ಮತ್ತಿತರು ಫೋಟೋ ತೆಗೆಸಿಕೊಂಡಿದ್ದಾರೆ. ಫೋಟೋ ತೆಗೆಯುತ್ತಿದ್ದ ವೇಳೆ ಆರ್.ಅಶೋಕ್ ಸ್ವಾಮೀಜಿಯ ಹೆಗಲ ಮೇಲೆ ಕೈ ಇಟ್ಟಿರುವ ಘಟನೆ ನಡೆದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ