1:15 PM Thursday 25 - December 2025

ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಆರ್.ಅಶೋಕ್!

r ashok
16/06/2024

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕಳೆದ 1 ವರ್ಷಗಳಿಂದ ಬೆಲೆ ಏರಿಕೆ ಭಾಗ್ಯ ಕೊಟ್ಟಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಹಾಲು, ಮದ್ಯ, ಮನೆ ತೆರಿಗೆ, ಸ್ಟ್ಯಾಂಪ್ ಡ್ಯೂಟಿ ಶುಲ್ಕ ಜಾಸ್ತಿ ಮಾಡಿದ್ದಾರೆ. ಈಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ದೊಡ್ಡ ಪ್ರಮಾಣದಲ್ಲಿ ಏರಿಕೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಅವಧಿಯಲ್ಲಿ ಸಣ್ಣ ಪ್ರಮಾಣದಲ್ಲಿ ಬೆಲೆ ಏರಿಕೆ ಮಾಡಿದಾಗ ಶವಯಾತ್ರೆ ಮಾಡುವ ಮೂಲಕ ಸಿದ್ದರಾಮಯ್ಯ ಹೋರಾಟ ಮಾಡಿದರು. ಆದರೆ, ಈಗ ನೀವು ಏನು ಮಾಡಿದ್ದೀರಿ?  ಎಂದು ಅವರು ಪ್ರಶ್ನಿಸಿದರು.

ಪೆಟ್ರೋಲ್ ಬೆಲೆ ಏರಿಕೆಯಿಂದ ಹಾಲು, ತರಕಾರಿ ಸೇರಿದಂತೆ ಎಲ್ಲ ವಸ್ತುಗಳ ಬೆಲೆ ಜಾಸ್ತಿ ಆಗುತ್ತಿದೆ. ಇದರಿಂದ ರಾಜ್ಯದ ಜನ ಕಾಫಿ, ಟೀ ಕುಡಿಯಲು ಆಗಲ್ಲ. ಸಿದ್ದರಾಮಯ್ಯಗೆ ಮಾನ, ಮರ್ಯಾದೆ ಇದೆಯಾ? ಆರ್​. ಅಶೋಕ್ ​ಗೆ ಜ್ಞಾನ ಇಲ್ಲ ಅಂದ್ರಿ, ನಿನಗೆ ಜ್ಞಾನ ಇದೆಯಾ ಸಿದ್ದರಾಮಯ್ಯ? ನಾಚಿಕೆ ಆಗಲ್ವಾ? ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ಮಾಡಿದರು.

ಸಿದ್ದರಾಮಯ್ಯ ಔಟ್ ಗೋಯಿಂಗ್ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ ವಿಧಾನಸೌಧ ಅಡಮಾನ ಇಡಲು‌ ಹೊರಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version