ಟ್ರೈನಿ ವೈದ್ಯೆಯ ಅತ್ಯಾಚಾರ, ಕೊಲೆ: ಆರೋಪಿಗೆ ಮರಣದಂಡನೆ ವಿಧಿಸಿ ಎಂದು ಕೋರ್ಟ್ ಮೆಟ್ಟಿಲೇರಿದ ದೀದಿ ಸರ್ಕಾರ - Mahanayaka

ಟ್ರೈನಿ ವೈದ್ಯೆಯ ಅತ್ಯಾಚಾರ, ಕೊಲೆ: ಆರೋಪಿಗೆ ಮರಣದಂಡನೆ ವಿಧಿಸಿ ಎಂದು ಕೋರ್ಟ್ ಮೆಟ್ಟಿಲೇರಿದ ದೀದಿ ಸರ್ಕಾರ

21/01/2025


Provided by

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆಯ ಅತ್ಯಾಚಾರ, ಕೊಲೆ ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಬಂಗಾಳ ಸರ್ಕಾರ ಕೋಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದೆ. ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಕೋಲ್ಕತ್ತಾ ನ್ಯಾಯಾಲಯವು ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಕೊಲೆ ಪ್ರಕರಣದಲ್ಲಿ ಆರೋಪಿ ಸಂಜಯ್ ರಾಯ್‌ಗೆ ಮರಣದಂಡನೆ ವಿಧಿಸುವಂತೆ ಕೋರಿ ಪಶ್ಚಿಮ ಬಂಗಾಳ ಸರ್ಕಾರ ಇಂದು ಕೋಲ್ಕತ್ತಾ ಹೈಕೋರ್ಟ್​ಗೆ ಮನವಿ ಮಾಡಿದೆ. ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ಸೀಲ್ದಾ ನ್ಯಾಯಾಲಯದ ತೀರ್ಪಿನ ವಿರುದ್ಧ ಅಡ್ವೊಕೇಟ್ ಜನರಲ್ ಕಿಶೋರ್ ದತ್ತಾ ವಿಭಾಗೀಯ ಪೀಠದ ನ್ಯಾಯಮೂರ್ತಿ ದೇಬಂಗ್ಶು ಬಸಾಕ್ ರ ಬಳಿ ಮನವಿ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಕೋಲ್ಕತ್ತಾ ನ್ಯಾಯಾಲಯವು ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ತನಿಖೆಯನ್ನು ರಾಜ್ಯ ಪೊಲೀಸರಿಂದ ಬಲವಂತವಾಗಿ ತೆಗೆದುಕೊಳ್ಳಲಾಗಿದೆ. ಮೊದಲ ದಿನದಿಂದಲೇ ನಾವೆಲ್ಲರು ಮರಣದಂಡನೆಗೆ ಒತ್ತಾಯಿಸಿದ್ದೆವು, ಆದರೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ ಎಂದಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ