7:46 PM Thursday 29 - January 2026

 ನಟ ರಾಘವೇಂದ್ರ ರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

16/02/2021

ಬೆಂಗಳೂರು:  ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಇಂದು ಸಂಜೆ 6 ಗಂಟೆಗೆ ರಾಘವೇಂದ್ರ ರಾಜ್ ಕುಮಾರ್ ಆರೋಗ್ಯ ತಪಾಸಣೆಗೆ ಬಂದಿದ್ದರು ಎಂದು ತಿಳಿದು ಬಂದಿದೆ.  ರಾಘವೇಂದ್ರ ರಾಜ್ ಕುಮಾರ್ ಅವರಿಗೆ ಗಂಭೀರ ಸಮಸ್ಯೆಗಳೇನೂ ಇಲ್ಲ, ಅವರ ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ,ಅವರು ಇಂದು ಮಧ್ಯರಾತ್ರಿ ಇಲ್ಲವೇ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇನ್ನೂ ರಾಘವೇಂದ್ರ ರಾಜ್ ಕುಮಾರ್ ಅವರ ಸಹೋದರ ಶಿವರಾಜ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಬೆಳಗ್ಗಿನಿಂದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ರಾಘವೇಂದ್ರ ರಾಜ್ ಕುಮಾರ್ ಆಸ್ಪತ್ರೆಗೆ ತೆರಳಿ ತಪಾಸಣೆ ನಡೆಸಿದ್ದರು ಎನ್ನುವ ಮಾಹಿತಿ ಸದ್ಯ ಲಭ್ಯವಾಗಿದೆ. ಹೆಚ್ಚಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ…

ಇತ್ತೀಚಿನ ಸುದ್ದಿ

Exit mobile version