'ರಾಗಿ ಕಳ್ಳ' ಅಂದಿದ್ದಕ್ಕೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ ಶಿವಲಿಂಗೇಗೌಡ - Mahanayaka

‘ರಾಗಿ ಕಳ್ಳ’ ಅಂದಿದ್ದಕ್ಕೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ ಶಿವಲಿಂಗೇಗೌಡ

shivalinge gowda
29/08/2022


Provided by

‘ಶಿವಲಿಂಗೇಗೌಡ ರಾಗಿ ಕಳ್ಳ’ ಎಂದು  ಬಿಜೆಪಿ ಮುಖಂಡರು ಆರೋಪ ಮಾಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳಕ್ಕೆ ಆಗಮಿಸಿದ ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಆಣೆ ಪ್ರಮಾಣ ಮಾಡಿದ್ದಾರೆ.

ಶಿವಲಿಂಗೇಗೌಡ ‘ರಾಗಿ ಕಳ್ಳ’ ಎಂದು ಬಿಜೆಪಿ ಮುಖಂಡರು ಆರೋಪ ಮಾಡಿದ್ದರು.‌ ಈ ಆರೋಪಕ್ಕೆ ಧರ್ಮಸ್ಥಳ ದೇವಸ್ಥಾನದಲ್ಲಿ ಆಣೆ‌‌‌ ಪ್ರಮಾಣ ಮಾಡುವುದಾಗಿ ಶಿವಲಿಂಗೇ ಗೌಡ ಹೇಳಿಕೆ ನೀಡಿದ್ದರು.

ಅದರಂತೆ ಧರ್ಮಸ್ಥಳಕ್ಕೆ ಆಗಮಿಸಿದ ಅವರು ನೇತ್ರಾವತಿ ಸ್ನಾನಘಟ್ಟದಲ್ಲಿ ಸ್ನಾನ ಮಾಡಿದ ನಂತರ ಡಾ.ವೀರೇಂದ್ರ ಹೆಗ್ಗಡೆ ಭೇಟಿ ಮಾಡಿದರು. ಬಳಿಕ ಶ್ರೀ  ಮಂಜುನಾಥನ ಮುಂದೆ ಆಣೆ ಪ್ರಮಾಣ ಮಾಡಿದ್ರು.  ಈ ವೇಳೆ ಶಾಸಕ ಶಿವಲಿಂಗೇಗೌಡರ ಜೊತೆ 100 ಕ್ಕೂ ಅಧಿಕ ಬೆಂಬಲಿಗರು ಜೊತೆಗಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ