10:08 PM Saturday 18 - October 2025

ಜಾಮೀನಿಗಾಗಿ ರಾಗಿಣಿ-ಸಂಜನಾ ಯಾರ ಮೊರೆ ಹೋಗಿದ್ದಾರೆ ಗೊತ್ತಾ?

28/11/2020

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ವಿಚಾರದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಜಾಮೀನಿಗಾಗಿ  ಇದೀಗ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದು, ಅರ್ಜಿ ಸಲ್ಲಿಸಿದ್ದಾರೆ.

ಕಳೆದ ಮೂರು ತಿಂಗಳಿನಿಂದ ಜೈಲಿನಲ್ಲಿರುವ  ನಟಿ ರಾಗಿಣಿ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.  ಸೆಪ್ಟೆಂಬರ್ ನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿ ಪರಪ್ಪನ ಅಗ್ರಹದಲ್ಲಿ ಅವರು ವಾಸ ಮಾಡುತ್ತಿದ್ದಾರೆ.

ರಾಗಿಣಿಗೆ ನವೆಂಬರ್​ 3ರಂದು ಹೈಕೋರ್ಟ್​ ಜಾಮೀನು ನಿರಾಕರಿಸಿತ್ತು. ಸದ್ಯ  ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ರಾಗಿಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು ಆ ಕುರಿತ ಅರ್ಜಿ ವಿಚಾರಣೆ ಡಿಸೆಂಬರ್ 4ರಂದು ನಡೆಯಲಿದೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

Exit mobile version