ಜೈಲಿನಲ್ಲಿ ರಾಗಿಣಿ ಆರೋಗ್ಯದಲ್ಲಿ ಏರುಪೇರು |  ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು - Mahanayaka
5:36 AM Thursday 18 - September 2025

ಜೈಲಿನಲ್ಲಿ ರಾಗಿಣಿ ಆರೋಗ್ಯದಲ್ಲಿ ಏರುಪೇರು |  ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು

24/12/2020

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ವಾಸದಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.


Provided by

ಉಸಿರಾಟದ ತೊಂದರೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಾಗಿಣಿ ನಿನ್ನೆ ಈ ವಿಚಾರವನ್ನು ಜೈಲು ಅಧಿಕಾರಿಗಳಿಗೆ ತಿಳಿಸಿದ್ದರು. ನಿನ್ನೆ ಜೈಲಿನ ಆಸ್ಪತ್ರೆಯಲ್ಲಿಯೇ ರಾಗಿಣಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ರಾಗಿಣಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚೆಗಷ್ಟೆ ಜೈಲಿನಲ್ಲಿ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ನಟಿ ಸಂಜನಾ ಅವರಿಗೆ ಚಿಕಿತ್ಸೆಯ ಅಗತ್ಯದ ಹಿನ್ನೆಲೆಯಲ್ಲಿ ಜಾಮೀನು ನೀಡಲಾಗಿತ್ತು. ಇದಾಗಿ ಕೆಲವು ದಿನಗಳ ನಂತರ ಇದೀಗ ರಾಗಿಣಿ ದ್ವಿವೇದಿ ಅವರಿಗೂ ಅನಾರೋಗ್ಯ ಕಾಡಿದ್ದು, ಇದೀಗ ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ