ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ರಾಹುಲ್ ದ್ರಾವಿಡ್

rahul draved
26/04/2024

ಬೆಂಗಳೂರು: ಇಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಇದೇ ವೇಳೆ ಕ್ರಿಕೆಟ್ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಅವರು ಬೆಂಗಳೂರಿನಲ್ಲಿ ಮತಚಲಾಯಿಸಿದ್ದು, ಎಲ್ಲರೂ ತಪ್ಪದೇ ಮತದಾನ ಮಾಡುವಂತೆ ಕರೆ ನೀಡಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮಲ್ಲೇಶ್ವರಂ ವಿಧಾನಸಭಾ ವ್ಯಾಪ್ತಿಯ ಆರ್ ಎಂವಿ ಕ್ಲಬ್ ನ ಮತಗಟ್ಟೆಗೆ ಕುಟುಂಬ ಸಮೇತವಾಗಿ ಆಗಮಿಸಿದ ಅವರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಮತಚಲಾಯಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಯಮಾಡಿ ಬಂದು ವೋಟ್ ಮಾಡಿ, ಎಲ್ಲ ವ್ಯವಸ್ಥೆಗಳು ಚೆನ್ನಾಗಿದೆ, ಪ್ರಜಾಪ್ರಭುತ್ವವನ್ನು ಮುಂದೆ ತರೋಕೆ ಎಲ್ಲರಿಗೂ ಒಂದೊಳ್ಳೆ ಅವಕಾಶ ಎಂದು ಅವರು ಹೇಳಿದರು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿhttps://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version