‘ರಾಜಾ ಕಿ ಆತ್ಮ ಇವಿಎಂ’: ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ

17/03/2024

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಮುಂಬೈನಲ್ಲಿ ನಡೆದ ಇಂಡಿಯಾ ಬಣದ ಮೆಗಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ಇವಿಎಂ ತಿರುಚಿದ ನಂತರ ಬಿಜೆಪಿ ಚುನಾವಣೆಯಲ್ಲಿ ಗೆದ್ದಿದೆ ಎಂದು ಹಲವಾರು ವಿರೋಧ ಪಕ್ಷದ ನಾಯಕರು ಹೇಳಿದ್ದಾರೆ. ಈ ಇವಿಎಂ ವಿವಾದವನ್ನು ಉಲ್ಲೇಖಿಸಿ ಮಾತನಾಡಿದ ರಾಹುಲ್ ಗಾಂಧಿ ‘ರಾಜಾ ಕಿ ಆತ್ಮ ಇವಿಎಂ ಮೇ ಹೈ’ (ರಾಜನ ಆತ್ಮ ಇವಿಎಂನಲ್ಲಿದೆ) ಎಂದು ಆರೋಪಿಸಿದ್ದಾರೆ.

ಹಿಂದೂ ಧರ್ಮದಲ್ಲಿ ‘ಶಕ್ತಿ’ ಎಂಬ ಪದವಿದೆ. ನಾವು ಶಕ್ತಿಯ ವಿರುದ್ಧ ಹೋರಾಡುತ್ತಿದ್ದೇವೆ. ಪ್ರಶ್ನೆಯೆಂದರೆ, ಆ ಶಕ್ತಿ ಯಾವುದು..? ರಾಜನ ಆತ್ಮ ಇವಿಎಂನಲ್ಲಿದೆ. ಇದು ನಿಜ. ಇವಿಎಂ ಮತ್ತು ದೇಶದ ಪ್ರತಿಯೊಂದು ಸಂಸ್ಥೆಯಲ್ಲಿ, ಇಡಿ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯಲ್ಲಿದೆ ರಾಜನ ಆತ್ಮ. ಮಹಾರಾಷ್ಟ್ರದ ಹಿರಿಯ ನಾಯಕರೊಬ್ಬರು ಕಾಂಗ್ರೆಸ್ ತೊರೆದು ನನ್ನ ತಾಯಿಯ ಮುಂದೆ ಅಳುತ್ತಿದ್ದರು ಮತ್ತು ‘ಸೋನಿಯಾ ಜೀ, ಈ ಶಕ್ತಿಯ ವಿರುದ್ಧ ಹೋರಾಡಲು ನನಗೆ ಶಕ್ತಿ ಇಲ್ಲ ಎಂದು ನನಗೆ ನಾಚಿಕೆಯಾಗುತ್ತದೆ. ನಾನು ಜೈಲಿಗೆ ಹೋಗಲು ಬಯಸುವುದಿಲ್ಲ.’ ಸಾವಿರಾರು ಜನರಿಗೆ ಈ ರೀತಿ ಬೆದರಿಕೆ ಹಾಕಲಾಗಿದೆ” ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.

ಮತ್ರೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪ್ರಧಾನಿಯದ್ದು ಕೇವಲ ಮುಖವಾಡ. ಅವರಿಗೆ 56 ಇಂಚಿನ ಎದೆ ಇಲ್ಲ, ಅವರು ಟೊಳ್ಳು ಎಂದು ಹೇಳಿದರು.
ಇಡಿ ಮತ್ತು ಇತರ ತನಿಖಾ ಸಂಸ್ಥೆಗಳಿಗೆ ಹೆದರಿ ಜನರು ಬಿಜೆಪಿಗೆ ಹೋಗುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version