ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ ಗಾಂಧಿ ಆಕ್ರೋಶ - Mahanayaka

ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ ಗಾಂಧಿ ಆಕ್ರೋಶ

rahul gandhi
24/03/2023

ಹೊಸದಿಲ್ಲಿ:  ಭಾರತದ ಪ್ರಜಾಪ್ರಭುತ್ವವನ್ನು ಮುಗಿಸಲು ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸುವ ಆದೇಶ ಹೊರಬೀಳುತ್ತಿದ್ದಂತೆಯೇ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿರುವ ಅವರು, ನರೇಂದ್ರ ಮೋದಿ, ನಿಮ್ಮ ಭಟ್ಟಂಗಿಗಳು ಹುತಾತ್ಮ ಪ್ರಧಾನಿಯ ಮಗನನ್ನು ವಂಚಕ ಹಾಗೂ ಮಿರ್ ಜಾಫರ್ ಎಂದು ಕರೆದಿದ್ದಾರೆ. ರಾಹುಲ್ ಗಾಂಧಿ ಅವರ ತಂದೆ ಯಾರು ಎಂದು ನಿಮ್ಮ ಒಬ್ಬರು ಮುಖ್ಯಮಂತ್ರಿ ಪ್ರಶ್ನೆ ಮಾಡಿದ್ದಾರೆ” ಎಂದು ಪ್ರಿಯಾಂಕಾ ಕಿಡಿಕಾರಿದ್ದಾರೆ.

“ಕಾಶ್ಮೀರಿ ಪಂಡಿತರ ಸಂಪ್ರದಾಯದಂತೆ, ತಂದೆಯ ಸಾವಿನ ಬಳಿಕ ಮಗ ಟರ್ಬನ್ ಧರಿಸಿ ಆತನ ಕುಟುಂಬದ ಪದ್ಧತಿಗಳನ್ನು ಜೀವಂತವಾಗಿ ಇರಿಸುತ್ತಾನೆ. ಆದರೆ ನೀವು ಇಡೀ ಕುಟುಂಬ ಮತ್ತು ಕಾಶ್ಮೀರಿ ಪಂಡಿತ ಸಮುದಾಯವನ್ನು ಸಂಸತ್ ನಲ್ಲಿ ಅವಮಾನಿಸಿದ್ದೀರಿ ಹಾಗೂ ಅವರ ಸರ್‌ ನೇಮ್ ಆಗಿ ನೆಹರೂ ಎಂದು ಏಕೆ ಇರಿಸಿಲ್ಲ ಎಂಬುದಾಗಿ ಕೇಳಿದ್ದೀರಿ. ಆದರೆ ಯಾವ ನ್ಯಾಯಾಧೀಶರೂ ನಿಮಗೆ ಶಿಕ್ಷೆ ನೀಡಿಲ್ಲ. ನಿಮ್ಮನ್ನು ಸಂಸತ್‌ ನಿಂದ ಅನರ್ಹಗೊಳಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿಗೆ ಬಿಜೆಪಿ ಹೆದರುತ್ತಿದೆ: ಎಂ.ಕೆ.ಸ್ಟಾಲಿನ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಖಂಡಿಸಿದ್ದಾರೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಸೃಷ್ಟಿಸಿದ ಪರಿಣಾಮವೂ ಬಿಜೆಪಿಯ ಭಯಕ್ಕೆ ಕಾರಣವಾಗಿದೆ. ರಾಹುಲ್ ಗಾಂಧಿಗೆ ಬಿಜೆಪಿ ಎಷ್ಟು ಹೆದರುತ್ತಿದೆ ಎಂಬುದು ಈಗ ಸ್ಪಷ್ಟವಾಗಿದೆ. ಸಂಸತ್ತಿನಲ್ಲಿ ರಾಹುಲ್ ಗಾಂಧಿ ಮಾಡಿದ ಯಾವುದೇ ಆರೋಪಗಳಿಗೆ ಕೇಂದ್ರ ಸರ್ಕಾರದ ಯಾರೂ ಇದುವರೆಗೆ ಪ್ರತಿಕ್ರಿಯಿಸಿಲ್ಲ. ಅವರು ಮತ್ತೆ ಸಂಸತ್ತಿಗೆ ಪ್ರವೇಶಿಸಿದರೆ ತಮ್ಮ ರಾಜಕೀಯಕ್ಕೆ ಧಕ್ಕೆಯಾಗುತ್ತದೆ ಎಂಬ ಭಯದಿಂದ ಅವರನ್ನು ಅನರ್ಹಗೊಳಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಭಾರತದ ಯುವ ನಾಯಕ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸುವ ಫ್ಯಾಸಿಸ್ಟ್ ಕೃತ್ಯವನ್ನು ನಾನು ನಿಸ್ಸಂದಿಗ್ಧವಾಗಿ ಖಂಡಿಸುತ್ತೇನೆ. ಇದು ರಾಷ್ಟ್ರೀಯ ಪಕ್ಷದ ನಾಯಕ ಮತ್ತು ಸಂಸದರ ಅಭಿಪ್ರಾಯ ವ್ಯಕ್ತಪಡಿಸುವ ಮೂಲಭೂತ ಪ್ರಜಾಸತ್ತಾತ್ಮಕ ಹಕ್ಕನ್ನು ಬೆದರಿಸುವ ಮತ್ತು ಮೊಟಕುಗೊಳಿಸುವುದಕ್ಕೆ ಸಮಾನವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ