ವಯನಾಡ್‌ನಲ್ಲಿ ಮಾನವ-ಪ್ರಾಣಿ ಸಂಘರ್ಷ ಅಂತ್ಯಕ್ಕೆ ರಾಹುಲ್ ಗಾಂಧಿ ಆಗ್ರಹ

ಕೇರಳದ ವಯನಾಡ್ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ದಾಳಿಯಿಂದ ಮೂವರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ರಾಹುಲ್ ಗಾಂಧಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಇದೇ ವೇಳೆ ಅವರು “ಮಾನವ-ಪ್ರಾಣಿ ಸಂಘರ್ಷ” ಕ್ಕೆ ಪರಿಹಾರವನ್ನು ಕೋರಿದರು. ಅಲ್ಲದೇ ಬಲಿಪಶುಗಳ ಕುಟುಂಬಗಳಿಗೆ ಪರಿಹಾರವನ್ನು ನೀಡುವಂತೆ ಒತ್ತಾಯಿಸಿದರು.
ಲೋಕಸಭೆಯಲ್ಲಿ ವಯನಾಡ್ ಅನ್ನು ಪ್ರತಿನಿಧಿಸುವ ರಾಹುಲ್ ಗಾಂಧಿ, ಮಾನವ-ಪ್ರಾಣಿ ಸಂಘರ್ಷವನ್ನು ಪರಿಹರಿಸಲು ಕೇರಳ, ತಮಿಳುನಾಡು ಮತ್ತು ಕರ್ನಾಟಕ ಪರಸ್ಪರ ಸಮನ್ವಯ ಸಾಧಿಸಬೇಕು ಎಂದು ಹೇಳಿದರು.
ಕೇರಳ, ತಮಿಳುನಾಡು ಮತ್ತು ಕರ್ನಾಟಕದ ನಡುವೆ ಅಂತರರಾಜ್ಯ ಸಹಕಾರದ ಪ್ರಶ್ನೆ ಇದೆ. ವಿಷಯಕ್ಕೆ ಸಂಬಂಧಿಸಿದಂತೆ ನಾವು ಸಮನ್ವಯವನ್ನು ಸುಧಾರಿಸಲು ಪ್ರಯತ್ನಿಸುತ್ತೇವೆ” ಎಂದು ಕಾಂಗ್ರೆಸ್ ನಾಯಕ ಹೇಳಿದರು.
ಪ್ರಾಣಿ ದಾಳಿಗೆ ಬಲಿಯಾದವರ ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗಿದೆ ಎಂದು ಅವರು ಹೇಳಿದರು. ವಯನಾಡ್ ನಲ್ಲಿ ಒಂದು ಕ್ಷಿಪ್ರ ಪ್ರತಿಕ್ರಿಯೆ ತಂಡ ಕಾರ್ಯನಿರ್ವಹಿಸುತ್ತಿದೆ, ಇದು ಸಾಕಾಗುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.
ತಂಡಗಳ ಸಂಖ್ಯೆಯನ್ನು ಹೆಚ್ಚಿಸಲು ಮತ್ತು ಅವರಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳಲು ನಾನು ಜಿಲ್ಲಾ ಅಧಿಕಾರಿಗಳಿಗೆ ಸಂವಹನ ನಡೆಸಿದ್ದೇನೆ ಎಂದು ಅವರು ಹೇಳಿದರು.