ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆಗೆ ರಾಷ್ಟ್ರಪತಿ, ದಲಿತರನ್ನು ಆಹ್ವಾನಿಸದ ಮೋದಿ ಸರ್ಕಾರ: ರಾಹುಲ್ ಗಾಂಧಿ ವಾಗ್ದಾಳಿ

raghul gandhi
19/02/2024

ಪ್ರತಾಪಗಢ: ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸರ್ಕಾರವು ದಲಿತರು, ಹಿಂದುಳಿದ ವರ್ಗದವರು ಮತ್ತು ರಾಷ್ಟ್ರಪತಿಯವರಿಗೆ ಆಹ್ವಾನ ನೀಡದೆ ಅವಮಾನಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತ ಜೋಡೊ ನ್ಯಾಯ ಯಾತ್ರೆ’ಯು ಉತ್ತರಪ್ರದೇಶದಲ್ಲಿ ಸಾಗುತ್ತಿದೆ. ರಾಂಪುರ ಖಾಸ್ ವಿಧಾನಸಭೆ ಕ್ಷೇತ್ರದ ಲಾಲ್ಗಂಜ್ ಇಂದಿರಾ ವೃತ್ತದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ರಾಹುಲ್ ಗಾಂಧಿ ಮಾತನಾಡುತ್ತಿದ್ದರು.

ದೇಶದಲ್ಲಿ ಶೇ.73ರಷ್ಟಿರುವ ದಲಿತರು, ಹಿಂದುಳಿದ ವರ್ಗದವರು, ಬುಡಕಟ್ಟು ಸಮುದಾಯದವರನ್ನು ಬಿಜೆಪಿ ಸರ್ಕಾರವು ಕಡೆಗಣಿಸುತ್ತಿದೆ ಎಂದು ಆರೋಪಿಸಿರುವ ರಾಹುಲ್, ಬಂಡವಾಳಶಾಹಿಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕೈಗಾರಿಕೋದ್ಯಮಿಗಳು ಮತ್ತು ನಟ ಅಮಿತಾಭ್ ಬಚ್ಚನ್ ಅವರಿಗೆ ಆಹ್ವಾನ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ ಶೇ 73 ರಷ್ಟಿರುವ ಜನರಿಗೆ ಯಾವುದೇ ಪ್ರಾತಿನಿಧ್ಯವಿಲ್ಲ ಎಂಬ ಸಂದೇಶ ನೀಡಿದ್ದಾರೆ ಎಂದರು.

ಮೋದಿ ಅವರು ರೈತರ ಜೇಬಿಗೆ ಕತ್ತರಿ ಹಾಕುವ ಮೂಲಕ ಶ್ರೀಮಂತರ ಜೇಬು ತುಂಬಿಸುತ್ತಿದ್ದಾರೆ. ಧರ್ಮದ ಹೆಸರಿನಲ್ಲಿ ದೇಶದಾದ್ಯಂತ ದ್ವೇಷ ಹರಡುವ ಕೆಲಸ ಮಾಡಲಾಗುತ್ತಿದೆ. ದೇಶದ ಯುವಕರಿಗೆ ಉದ್ಯೋಗ ನೀಡಲು, ಮಹಿಳೆಯರಿಗೆ ರಕ್ಷಣೆ ನೀಡಲು ಸರ್ಕಾರ ವಿಫಲವಾಗಿದೆ. ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

Exit mobile version