12:50 PM Tuesday 27 - January 2026

ಪ್ರಧಾನಿ ಮೋದಿಯವರನ್ನು ವ್ಯಂಗ್ಯ ಮಾಡಿದ ಹಿನ್ನೆಲೆ: ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದ ಚುನಾವಣಾ ಆಯೋಗ

06/03/2024

ಪ್ರಧಾನಿ ನರೇಂದ್ರ ಮೋದಿಯವರನ್ನು ‘ಕೆಟ್ಟ ಶಕುನ’ ಮತ್ತು ‘ಪಿಕ್ ಪಾಕೆಟ್’ ಎಂದು ವ್ಯಂಗ್ಯ‌ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ತಮ್ಮ ಸಾರ್ವಜನಿಕ ಭಾಷಣಗಳಲ್ಲಿ ಹೆಚ್ಚು ಜಾಗರೂಕರಾಗಿರಬೇಕು ಎಂದು ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.

ಕಳೆದ ವರ್ಷ ಡಿಸೆಂಬರ್ ನಲ್ಲಿ ದೆಹಲಿ ಹೈಕೋರ್ಟ್ ನಿರ್ದೇಶನದ ಮೇರೆಗೆ ಚುನಾವಣಾ ಆಯೋಗ ಕಾರ್ಯನಿರ್ವಹಿಸುತ್ತಿತ್ತು. ನವೆಂಬರ್ 22ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಪಿಕ್ ಪಾಕೆಟ್’ ಎಂದು ಕರೆದಿದ್ದ ರಾಹುಲ್ ಗಾಂಧಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು.

ಈ ಹೇಳಿಕೆಯು “ಉತ್ತಮ ಅಭಿರುಚಿಯನ್ನು ಹೊಂದಿಲ್ಲ” ಎಂದು ನ್ಯಾಯಾಲಯ ಹೇಳಿದೆ ಮತ್ತು ಎಂಟು ವಾರಗಳಲ್ಲಿ ಕಾನೂನಿನ ಪ್ರಕಾರ ಕಾರ್ಯನಿರ್ವಹಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ಚುನಾವಣಾ ಪ್ರಚಾರದ ಸಮಯದಲ್ಲಿ ಸ್ಟಾರ್ ಪ್ರಚಾರಕರು ಮತ್ತು ರಾಜಕೀಯ ನಾಯಕರಿಗೆ ನೀಡಿದ ಇತ್ತೀಚಿನ ಸಲಹೆಯನ್ನು ಅನುಸರಿಸುವಂತೆ ಚುನಾವಣಾ ಆಯೋಗವು ರಾಹುಲ್ ಗಾಂಧಿಯನ್ನು ಹೇಳಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version