ಡೆಲಿವೆರಿ ಬಾಯ್ ಜೊತೆ ಸ್ಕೂಟರ್‌ ನಲ್ಲಿ ತೆರಳಿದ ರಾಹುಲ್ ಗಾಂಧಿ - Mahanayaka

ಡೆಲಿವೆರಿ ಬಾಯ್ ಜೊತೆ ಸ್ಕೂಟರ್‌ ನಲ್ಲಿ ತೆರಳಿದ ರಾಹುಲ್ ಗಾಂಧಿ

rahul gandhi
08/05/2023

ಪ್ರಧಾನಿ ಮೋದಿಯವರ ಬೆಂಗಳೂರಿನಲ್ಲಿನ ರೋಡ್ ಶೋ ಟ್ರಿನಿಟಿ ಸರ್ಕಲ್‌ನಲ್ಲಿ ರೋಡ್‌ ಶೋ ಮುಕ್ತಾಯಗೊಂಡ ಕೆಲವೇ ಗಂಟೆಗಳ ನಂತರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಹೋಟೆಲ್‌ಗೆ ತಲುಪಲು ಡೆಲಿವರಿ ಬಾಯ್‌ನ ಸ್ಕೂಟರ್‌ ನಲ್ಲಿ ಹಿಂಬದಿ ಸವಾರರಾಗಿ ಪ್ರಯಾಣ ಬೆಳೆಸಿದ್ದಾರೆ.

ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ರಾಜ್ಯ ರಾಜಧಾನಿಯಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಲು ನಿರ್ಧರಿಸಿರುವ ರಾಹುಲ್, ಡೆಲಿವರಿ ಬಾಯ್‌ನ ಸ್ಕೂಟರ್‌ನಲ್ಲಿ ಸುಮಾರು 2 ಕಿ.ಮೀ. ಪ್ರಯಾಣಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಕೇವಲ ಮೂರು ದಿನಗಳು ಬಾಕಿ ಉಳಿದಿದ್ದು, ಎಲ್ಲಾ ಪಕ್ಷಗಳು ತಮ್ಮ ಪ್ರಚಾರದ ಕೊನೆಯ ಹಂತಗಳಲ್ಲಿ ಸಾಗುತ್ತಿವೆ. ಮತದಾರರನ್ನು ಓಲೈಸಲು ಎಲ್ಲಾ ರೀತಿಯ ಕಸರತ್ತುಗಳನ್ನು ನಡೆಸುತ್ತಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ