8:23 AM Saturday 25 - October 2025

ಏ. 5ರ ಬದಲು ಏ.9ಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಪ್ರವಾಸ

rahulgandhi
02/04/2023

ಬೆಂಗಳೂರು : ಭಾರತ ಜೋಡೋ  ಯಾತ್ರೆ  ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡನೇ ಬಾರಿಗೆ ರಾಜ್ಯಕ್ಕೆ ಪ್ರವಾಸ ಕೈಗೊಂಡಿದ್ದರು.  ಕೋಲಾರದಲ್ಲಿ ಭಾರತ್ ಜೋಡೋ ಯಾತ್ರೆ “ಸತ್ಯಮೇವ ಜಯತೆ” ಸಮಾವೇಶದಲ್ಲಿ ಏಪ್ರಿಲ್ 5 ರಂದು ಪೂರ್ವ ನಿಗದಿಯಂತೆ ಕೋಲಾರದಲ್ಲಿ ಸತ್ಯಮೇವ ಜಯತೆ ಸಮಾವೇಶ ನಿಗದಿಯಾಗಿತ್ತು. ಆದರೆ ಸಮಾವೇಶ ಏಪ್ರಿಲ್ 9ಕ್ಕೆ ಮುಂದೂಡಿಕೆಯಾಗಿದೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 9 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ . ಇನ್ನು ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ್ದಕ್ಕೆ ಕೋಲಾರದಿಂದಲೇ ಪ್ರತ್ಯುತ್ತರ ನೀಡಲು ಕಾಂಗ್ರೆಸಿಗರು ಮುಂದಾಗಿದ್ದಾರೆ. ರಾಹುಲ್ ಗಾಂಧಿ ರಾಜ್ಯ ಪ್ರವಾಸ ಭೇಟಿ ಹಿನ್ನೆಲೆ ನಿಗದಿಯಾಗಿದ್ದ ಸಭೆ ಕೂಡ ಮೊಟಕುಗೊಂಡಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಡಾ. ಜಿ. ಪರಮೇಶ್ವರ್, ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್, ಭೈರತಿ ಸುರೇಶ್, ಅಖಂಡ ಶ್ರೀನಿವಾಸ್ ಮೂರ್ತಿ ಇನ್ನೀತರ ನಾಯಕರು ಭಾಗಿಯಾಗಲಿದ್ದರು.

ಇನ್ನು ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, 2ನೇ ಹಂತದಲ್ಲಿ ಕಾಂಗ್ರೆಸ್ನ 100 ಟಿಕೆಟ್ ಕ್ಲಿಯರ್ ಮಾಡುತ್ತೇವೆ. ನಿನ್ನೆ ಕಾಂಗ್ರೆಸ್ ನ ಚುನಾವಣಾ ಸಮಿತಿ ಸಭೆ ನಡೆದಿದ್ದು ಸಭೆಯಲ್ಲಿ 3 ಅಥವಾ 4 ಕ್ಷೇತ್ರ ಬಿಟ್ಟು ಉಳಿದೆಲ್ಲ ಕ್ಷೇತ್ರಗಳನ್ನು ಕ್ಲಿಯರ್ ಮಾಡುವೆ. ಹಾಲಿ ಶಾಸಕರಿಗೆ ಟಿಕೆಟ್ ನೀಡುತ್ತೇವೆ, ಈ ಬಗ್ಗೆ ಚರ್ಚೆ ಆಗುತ್ತಿದೆ. ಟಿಕೆಟ್ ವಿಚಾರದಲ್ಲಿ ಯಾವುದೇ ಊಹಾಪೋಹ ಬೇಡವೆಂದು ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version