ಕೇರಳದಲ್ಲಿ ರಾಹುಲ್ ಗಾಂಧಿಯ ಹೆಲಿಕಾಪ್ಟರ್ ತಪಾಸಣೆ: ವೀಡಿಯೋ ವೈರಲ್

ಕೇರಳದ ವಯನಾಡಿಗೆ ಚುನಾವಣಾ ಪ್ರಚಾರಕ್ಕೆಂದು ಬಂದ ರಾಹುಲ್ ಗಾಂಧಿಯವರ ಹೆಲಿಕಾಪ್ಟರನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿರುವ ವಿಡಿಯೋ ವೈರಲಾಗಿದೆ. ಈ ಬಗ್ಗೆ ಪಿ ಟಿ ಐ ವಿಡಿಯೋ ಬಿಡುಗಡೆ ಮಾಡಿದೆ.
ಈ ಕುರಿತಂತೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ನಡೆದಿದೆ. ಚುನಾವಣಾ ಅಧಿಕಾರಿಗಳು ರಾಹುಲ್ ಗಾಂಧಿಯನ್ನು ಅವಮಾನಿಸುವ ಉದ್ದೇಶದಿಂದಲೇ ಈ ತಪಾಸಣೆ ನಡೆಸಿದ್ದಾರೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ. ಈ ನಡುವೆ ರಾಹುಲ್ ಗಾಂಧಿ ಈ ಕುರಿತಂತೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಚುನಾವಣಾ ಅಧಿಕಾರಿಗಳು ವಾಹನ ತಪಾಸಣೆ ಮಾಡುವುದು ಸಹಜವಾದರೂ ರಾಹುಲ್ ಗಾಂಧಿಯಂತಹ ನಾಯಕನನ್ನು ತಪಾಸಣೆಗೆ ಒಳಪಡಿಸುವುದರಲ್ಲಿ ತಪಾಸಣೆಯ ಹೊರತಾದ ಬೇರೆ ಉದ್ದೇಶವೂ ಇದೆ ಎಂಬ ಅಭಿಪ್ರಾಯಕ್ಕೆ ಹೆಚ್ಚು ಮನ್ನಣೆ ವ್ಯಕ್ತವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth