5:05 AM Thursday 10 - September 2026

ಸುರಿಯುತ್ತಿರುವ ಮಳೆಯ ನಡುವೆಯೇ ವಯನಾಡ್ ದುರಂತ ಸ್ಥಳಕ್ಕೆ ರಾಹುಲ್, ಪ್ರಿಯಂಕಾ ಗಾಂಧಿ ಭೇಟಿ

wayanad 6
01/08/2024

ವಯನಾಡ್: ಗುಡ್ಡ ಕುಸಿತದಿಂದ ನಿರ್ನಾಮವಾಗಿರುವ ವಯನಾಡ್ ನ ಪ್ರದೇಶಗಳಿಗೆ ಕಾಂಗ್ರೆಸ್ ನಾಯಕ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಂಕಾ ಗಾಂಧಿ ಭೇಟಿ ನೀಡಿದ್ದಾರೆ.

ಗಮ್ ಬೂಟ್ ಮತ್ತು ಮಳೆಯಿಂದ ರಕ್ಷಣೆಗಾಗಿ ರೈನ್ ಕೋಟ್ ಧರಿಸಿಕೊಂಡ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ದುರಂತ ಸಂಭವಿಸಿದ ಸ್ಥಳದಲ್ಲಿ ಓಡಾಡಿ ಸಿಬ್ಬಂದಿಗಳಿಂದ ಮಾಹಿತಿ ಪಡೆದರು.

ಸುರಿಯುವ ಮಳೆಯ ನಡುವೆಯೂ ರಾಹುಲ್ ಸ್ಥಳ ಪರಿಶೀಲನೆ ನಡೆಸಿದರು. ಚೂರ್ಲಮಲದ ದುರಂತ ಸ್ಥಳ, ಮೇಪ್ಪಾಡಿಯ ಸಂತ್ರಸ್ತರ ಕೇಂದ್ರಗಳಿಗೂ ರಾಹುಲ್ ಭೇಟಿ ನೀಡಿದರು.

ಗುಡ್ಡ ಕುಸಿತ ಸಂಭವಿಸಿದ ಸ್ಥಳ ಈಗ ಕೆಸರು ಗೆದ್ದೆಯಂತಾಗಿದೆ. ಮಣ್ಣು ಮತ್ತು ನೀರು ಸೇರಿಕೊಂಡು ನಡೆಯಲೂ ಕಷ್ಟವಾಗುವಂತಹ ಪರಿಸ್ಥಿತಿ ಎದುರಾಗಿದೆ. ಪರಿಹಾರ ಕಾರ್ಯ ಮುಂದುವರಿಸಲು ರಕ್ಷಣಾ ಸಿಬ್ಬಂದಿಗಳು ತಾತ್ಕಾಲಿಕವಾಗಿ ಸೇತುವೆ, ಡೇರೆಗಳನ್ನು ನಿರ್ಮಿಸಿಕೊಂಡಿದ್ದಾರೆ.

ಗುಡ್ಡ ಕುಸಿತದಿಂದಾಗಿ ವಯನಾಡಿನಲ್ಲಿ ಸಾವನ್ನಪ್ಪಿದವರ ಸಂಖ್ಯೆ 300 ಕ್ಕೆ ತಲುಪಿದೆ. ಇನ್ನೂ ನೂರಾರು ಜನ ನಾಪತ್ತೆಯಾಗಿದ್ದು ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti
Exit mobile version