10:47 PM Friday 12 - December 2025

ಯುವಕನನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದು ಬರ್ಬರ ಹತ್ಯೆ!: ಒಬ್ಬ ಆರೋಪಿಯ ಬಂಧನ

karim
18/05/2025

ರಾಯಚೂರು:  ಬೆಳ್ಳಂಬೆಳಗ್ಗೆ ಯುವಕನೊಬ್ಬನನ್ನು ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ರಾಯಚೂರು ನಗರದ ನಗರದ ಡಾ. ಜಾಕೀರ್ ಹುಸೇನ್ ವೃತ್ತದಲ್ಲಿ ನಡೆದಿದೆ.

ಜಹೀರಾಬಾದ್‌ನ ಬಡಾವಣೆಯ ಸಾದಿಕ್ (27) ಹತ್ಯೆಯಾದ ಯುವಕನಾಗಿದ್ದು, ಕೃತ್ಯಕ್ಕೆ ಸಂಬಂಧಿಸಿದಂತೆ ಕರೀಂ ಎಂಬಾತನನ್ನು ಬಂಧಿಸಲಾಗಿದೆ. ಮತ್ತೋರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಹತ್ಯೆಗೀಡಾದ ಸಾದಿಕ್  ಬೆಳಗ್ಗೆ ನಾಲ್ಕು ಗಂಟೆ ವೇಳೆಗೆ ಇಡ್ಲಿ ತಿನ್ನಲು ಮನೆಯಿಂದ ಹೊರ ಬಂದಿದ್ದ. ಈ ವೇಳೆ ಅಡ್ಡಗಟ್ಟಿದ ಆರೋಪಿಗಳು ಚಾಕುವಿನಿಂದ ಮನಬಂದಂತೆ ಚುಚ್ಚಿದ್ದಾರೆ.

ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಲ್ಲಿ ಬಿದ್ದಿದ್ದ ಸಾದಿಕ್ ನನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನ  ನಡೆದವು ಆದ್ರೆ ಮಾರ್ಗ ಮಧ್ಯೆ ಆತ ಸಾವನ್ನಪ್ಪಿದ್ದಾನೆ. ಹಳೆ ವೈಷಮ್ಯದ ಹಿನ್ನೆಲೆ ಹತ್ಯೆ ನಡೆಸಿರುವ ಶಂಕೆ ಮೂಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version