5:11 PM Wednesday 17 - September 2025

ಕೋಟ್ಪಾ ದಳದಿಂದ ದಾಳಿ: ದಂಡ ವಸೂಲಿ

udupii
24/03/2023

ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಸೋಮವಾರ ನಗರದ ಬೀಡಿನಗುಡ್ಡೆ, ಚಿಟ್ಪಾಡಿ ಹಾಗೂ ಬನ್ನಂಜೆ ವ್ಯಾಪ್ತಿಯ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4 ಮತ್ತು 6(ಎ) ಅಡಿಯಲ್ಲಿ 36 ಪ್ರಕರಣ ದಾಖಲಿಸಿ, 6,400 ರೂ. ದಂಡ ವಸೂಲಿ ಮಾಡಲಾಯಿತು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ತಾಲೂಕು ಶಿಕ್ಷಣಾ ಇಲಾಖೆಯ ಗೋಪಾಲ ಶೆಟ್ಟಿ, ಕಾರ್ಮಿಕ ನಿರೀಕ್ಷಕ ವಿಜೇಂದ್ರ ಕೆ, ಸರ್ವೇಕ್ಷಣಾಧಿಕಾರಿ ಕಚೇರಿಯ ಶೈಲಾ ಶ್ಯಾಮನೂರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version