4:50 PM Saturday 31 - January 2026

ಹೃದಯ ವಿದ್ರಾವಕ ಘಟನೆ: ರೈಲಿನಿಂದ ಇಳಿಯಲು ಯತ್ನಿಸಿದ ವಿದ್ಯಾರ್ಥಿನಿಯ ದಾರುಣ ಸಾವು

05/02/2021

ಕಲಬುರಗಿ: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಪ್ರಯತ್ನಿಸಿದ ವಿದ್ಯಾರ್ಥಿನಿ ಕೆಳಕ್ಕೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಬಳಿಯ ಹಲಕರ್ಟಿ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

17 ವರ್ಷದ ವಿದ್ಯಾರ್ಥಿನಿ ಕಿರಣಾ ಅವಘಡದಲ್ಲಿ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ.  ಕಿರಣಾ ಚಿತ್ತಾಪುರ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾಳೆ. ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವೇಳೆ ಈ  ಘಟನೆ ನಡೆದಿದೆ.

ಲಿಂಕ್ ಎಕ್ಸ್ ಪ್ರೆಸ್ ರೈಲು ಪ್ರತಿನಿತ್ಯ ನಿಲುಗಡೆಯಾಗುತ್ತಿದ್ದ ಸ್ಟಾಪ್ ನಲ್ಲಿ ಇಂದು ನಿಲ್ಲಿಸಿರಲಿಲ್ಲ. ರೈಲು ನಿಲ್ಲಿಸಲಿಲ್ಲ ಎಂದು ಬೆದರಿದ ಯುವತಿ ರೈಲಿನಿಂದ ಇಳಿಯಲು ಯತ್ನಿಸಿದ್ದು, ಈ ಸಂದರ್ಭ ಕೆಳಗೆ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

Exit mobile version