ಸ್ಕೌಟ್ & ಗೈಡ್ಸ್ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ - Mahanayaka

ಸ್ಕೌಟ್ & ಗೈಡ್ಸ್ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ

railway department jobs for scout and guides
14/11/2024

Railway Department Jobs for Scout & Guides : ಭಾರತೀಯ ರೈಲ್ವೆ ಇಲಾಖೆಯ ನೈರುತ್ಯ ರೈಲ್ವೆ ವಲಯದಲ್ಲಿ 2024–25ರ ಸ್ಕೌಟ್ & ಗೈಡ್ಸ್ ಕೋಟಾದ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ರೈಲ್ವೆ ಇಲಾಖೆಯ ಈ ಹುದ್ದೆಗಳಿಗೆ ಸ್ಕೌಟ್ ಅಂಡ್ ಗೈಡ್ಸ್ ಹೊರತಾಗಿ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಯಾವ ಯಾವ ನಗರಗಳಲ್ಲಿ ಹುದ್ದೆಗಳು ಖಾಲಿ ಇವೆ? ಆಯ್ಕೆ ಪ್ರಕ್ರಿಯೆ ಹೇಗೆ ಎಂಬ ಮಾಹಿತಿ ಸೇರಿದಂತೆ ಇತರೆ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ನೀಡಲಾಗಿದೆ.

ಹುದ್ದೆಗಳ ವಿವರ :

ಸ್ಕೌಟ್ & ಗೈಡ್ಸ್ ಕೋಟಾಟಾ ಅಡಿಯಲ್ಲಿ ಒಟ್ಟು 11 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ. ಈ ಹುದ್ದೆಗಳು ಹುಬ್ಬಳ್ಳಿ ಮೈಸೂರು ಹಾಗೂ ಯಲಹಂಕದ ರೈಲ್ವೆ ಗಾಲಿ ಕಾರ್ಖಾನೆಯಲ್ಲಿ ಖಾಲಿ ಇರುತ್ತವೆ.

ಏನೆಲ್ಲಾ ಅರ್ಹತೆಗಳಿರಬೇಕು?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಐಟಿಐ ಅಥವಾ ನ್ಯಾಷನಲ್ ಅಪ್ರೆಂಟಿಸ್ ಷಿಪ್ ಸರ್ಟಿಫಿಕೇಟ್ ಹೊಂದಿರುವಂತವರು ಅರ್ಜಿ ಸಲ್ಲಿಸಬಹುದು. ನಿಗದಿತ ವಿದ್ಯಾರ್ಹತೆಯಲ್ಲಿ ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ ಪಾಸಾಗಿರಬೇಕು. ಸ್ಕೌಟ್ ಅಂಡ್ ಗೈಡ್ಸ್ ನಲ್ಲಿ ಪ್ರಮುಖವಾಗಿ ಹಿಮಾಲಯನ್ ವುಡ್ ಬ್ಯಾಡ್ಜ್ ಹೊಂದಿರುವಂತವರು.

ವಯೋಮಿತಿ ಅರ್ಹತೆಯ ವಿವರ — ಅರ್ಜಿ ಸಲ್ಲಿಸುವಂತವರು ಕನಿಷ್ಠ 18ರಿಂದ ಗರಿಷ್ಟ 30 ವರ್ಷದ ಒಳಗೆ ಇರಬೇಕು.

ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ :

*   ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ ವರ್ಗದವರು, ಅಂಗವಿಕಲ ವರ್ಗದ ಅಭ್ಯರ್ಥಿಗಳು ಎಲ್ಲಾ ವರ್ಗದ ಮಹಿಳಾ ಅಭ್ಯರ್ಥಿಗಳು 250ರೂ. ಅರ್ಜಿ ಶುಲ್ಕ ಪಾವತಿಸಬೇಕು.

*    ಇನ್ನುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳು 500 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಕೆಯ ವಿವರ :

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲು ನಾವು ಕೆಳಗೆ ನೀಡಿರುವ ಅಧಿಕೃತ ಜಾಲತಾಣದ ಲಿಂಕ್ ನಿಂದ ಅರ್ಜಿ ಡೌನ್ ಲೋಡ್ ಮಾಡಿಕೊಂಡು ಕೆಳಗಿನ ವಿಳಾಸಕ್ಕೆ ಅಂಚೆ ಮುಖಾಂತರ ಕಳುಹಿಸಬೇಕು.

ವಿಳಾಸ : The Assistant Personal Officer/HQ South Western Railway HQ Office,

Personal Development, Rail Soudha

 Gadag Road Hubballi – 580020

 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ – 9 ಡಿಸೆಂಬರ್ 2024


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ