ಇಂದಿನಿಂದ 2 ದಿನಗಳವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಅಲರ್ಟ್! - Mahanayaka
12:45 PM Thursday 23 - October 2025

ಇಂದಿನಿಂದ 2 ದಿನಗಳವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಅಲರ್ಟ್!

rain
17/05/2025

ಬೆಂಗಳೂರು:  ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದೆ. ಇಂದಿನಿಂದ 2 ದಿನಗಳ ವರೆಗೆ ರಾಜ್ಯದಲ್ಲಿ ಭಾರೀ ಮಳೆಯ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ನೀಡಿದೆ.

ಮೇ 17ರಿಂದ ಎರಡು ದಿನಗಳವರೆಗೆ ಬೆಳಗಾವಿ, ಧಾರವಾಡ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಈ ಬಾರಿ ವಾಡಿಕೆಗಿಂತಲೂ ಮೊದಲೇ ಮುಂಗಾರು ಪ್ರವೇಶ ಸಾಧ್ಯತೆ ಇದೆ. ಮೇ 28ಕ್ಕೆ  ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ. ಅದೇ ದಿನ ಕರಾವಳಿಗೂ ಮುಂಗಾರು ಪ್ರವೇಶಿಸಲಿದೆ. ರಾಜ್ಯಕ್ಕೂ ಒಂದೆರಡು ದಿನಗಳಲ್ಲಿ ಮುಂಗಾರು ಪ್ರವೇಶಿಸಲಿದೆ ಎಂದು ಮುನ್ಸೂಚನೆ ದೊರಕಿದೆ.

ಈ ಬಾರಿ ವಾಡಿಕೆಗಿಂತ ಉತ್ತಮ ಮಳೆಯ ನಿರೀಕ್ಷೆ ಇದೆ. ವಾಡಿಕೆಯಂತೆ ಜೂನ್​ 1ರಂದು ಮುಂಗಾರು ಪ್ರವೇಶಿಸುತ್ತದೆ. ಆದರೆ, ಅಂಡಮಾನ್ ಮತ್ತು ನಿಕೋಬಾ‌ರ್ ದ್ವೀಪದಲ್ಲಿ ಮೇ 19ರಿಂದ ಮಾನ್ಸೂನ್ ಆರಂಭಕ್ಕೆ ಈಗಾಗಲೇ ಪೂರಕ ವಾತಾವರಣ ಉಂಟಾಗಿದೆ. ಆದ್ದರಿಂದ, ಮಾನ್ಸೂನ್ ಪ್ರಬಲವಾಗಿರುವ ಹಿನ್ನೆಲೆಯಲ್ಲಿ ಹಂತ ಹಂತವಾಗಿ ವ್ಯಾಪಿಸಿ, ಬೇಗನೆ ಕೇರಳ ಪ್ರವೇಶಿಸಲಿದೆ. ಈ ಬಾರಿ ಮುಂಗಾರು ಆಶಾದಾಯಕವಾಗಿರುವ ಕಾರಣ ಜೂನ್ 1ರಿಂದ ಸೆಪ್ಟೆಂಬರ್ 30ರ ವರೆಗೆ ವಾಡಿಕೆ ಅಥವಾ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ