ರಾಜ್ಯದಲ್ಲಿ ಏಪ್ರಿಲ್ 8ರವರೆಗೆ ಮಳೆಯಾಗುವ ಮುನ್ಸೂಚನೆ!

05/04/2025
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ರಾಜ್ಯದಲ್ಲಿ ಏ.8ರವರೆಗೆ ಪೂರ್ವ ಮುಂಗಾರು ಮಳೆಯಾಗುವ ಮುನ್ಸೂಚನೆ ಇದೆಯಂತೆ.
ಹವಾಮಾನ ಇಲಾಖೆ ವರದಿಯ ಪ್ರಕಾರ, ಕರಾವಳಿ ಜಿಲ್ಲೆಗಳಾದ ದ.ಕನ್ನಡ, ಉ.ಕನ್ನಡ, ಉಡುಪಿಯಲ್ಲಿ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ. ಕೆಲವೆಡೆ ಪ್ರತಿ ಗಂಟೆಗೆ 30–40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: