ಮಳೆ ಅವಾಂತರ: ಎರಡು ಮನೆ, ಎಲೆಕ್ಟ್ರಾನಿಕ್ ಶಾಪ್, ಕಾರ್ ಸಂಪೂರ್ಣ ಜಖಂ

ಚಿಕ್ಕಮಗಳೂರು: ಕಾಫಿನಾಡ ಮಲೆನಾಡಲ್ಲಿ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ.
ಭಾರೀ ಮಳೆಯ ಹಿನ್ನೆಲೆ ಮನೆಯೊಂದರ ಗೋಡೆ ಕುಸಿದು ಬಿದ್ದ ಪರಿಣಾಮ, ಎರಡು ಮನೆ, ಎಲೆಕ್ಟ್ರಾನಿಕ್ ಶಾಪ್, ಕಾರ್ ಸಂಪೂರ್ಣ ಜಖಂಗೊಂಡಿದೆ.
ಮೂಡಿಗೆರೆ ಪಟ್ಟಣದ ಹೊರವಲಯದ ಗಂಗನಮಕ್ಕಿಯಲ್ಲಿ ಈ ಘಟನೆ ನಡೆದಿದೆ. ಗ್ಯಾರೇಜಿಗೆ ಬಿಟ್ಟಿದ್ದ ಕಾರಿನ ಮೇಲೆಯೇ ಗೋಡೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಘಟನೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಪ್ರಾಣ ಹಾನಿ ತಪ್ಪಿದೆ.
ಕಾರು ಹಾಗೂ ಮನೆಯ ಮೇಲೆ ಮನೆಯ ಗೋಡೆ ಕುಸಿದಿದೆ, ಎಲೆಕ್ಟ್ರಿಕ್ ಶಾಪ್ ನ ಉಪಕರಣಗಳು ಸಂಪೂರ್ಣ ಹಾನಿಯಾಗಿವೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD