ನಾಳೆ ಈ ಭಾಗಗಳಲ್ಲಿ ಮಳೆಯಾಗಲಿದೆ: ಹೀಗಿದೆ ಹವಾಮಾನ ಇಲಾಖೆ ವರದಿ - Mahanayaka

ನಾಳೆ ಈ ಭಾಗಗಳಲ್ಲಿ ಮಳೆಯಾಗಲಿದೆ: ಹೀಗಿದೆ ಹವಾಮಾನ ಇಲಾಖೆ ವರದಿ

rain clouds
27/08/2024

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ( ಪೂರ್ವದ ಮೋಡದಿಂದ, ಗುಡುಗು ಸಾಧ್ಯತೆಯೂ ಇದೆ)


Provided by

ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಚಿತ್ರದುರ್ಗ, ದಾವಣಗೆರೆ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಗುಜರಾತ್ ವಾಯುಭಾರ ಕುಸಿತದ ಚಲನೆಯು ನಿಧಾನವಾಗುತ್ತಿದ್ದು, ಆಗಸ್ಟ್ 30ರಂದು ಅರಬ್ಬಿ ಸಮುದ್ರಕ್ಕೆ ಪ್ರವೇಶಿಸುತ್ತಿದ್ದಂತೆಯೇ ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದೇ ಸಮಯದಲ್ಲಿ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಗಡಿಭಾಗದಲ್ಲಿ ಇನ್ನೊಂದು ತಿರುಗುವಿಕೆ ಉಂಟಾಗುವ ಲಕ್ಷಣಗಳಿವೆ.

ಸೆಪ್ಟೆಂಬರ್ 1ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ ,ಉತ್ತರ ಭಾರತದ ಪರಿಸ್ಥಿತಿಯ ಮೇಲೆ ಅವಲಂಬಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ