ಇಂದಿನಿಂದ ಏಪ್ರಿಲ್ 17ರವರೆಗೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ: ಹವಾಮಾನ ಇಲಾಖೆ - Mahanayaka
1:22 PM Tuesday 2 - September 2025

ಇಂದಿನಿಂದ ಏಪ್ರಿಲ್ 17ರವರೆಗೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ: ಹವಾಮಾನ ಇಲಾಖೆ

rain
11/04/2024


Provided by

ಬೆಂಗಳೂರು: ಇಂದಿನಿಂದ ಏಪ್ರಿಲ್ 17ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮೂರು ದಿನ ಒಣಹವೆ ಮುಂದುವರೆಯಲಿದ್ದು, ಏಪ್ರಿಲ್​ 15ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ.  ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರ, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಏಪ್ರಿಲ್​ 12,13 ರಂದು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ಈ ಬಾರಿ ವಿವಿಧ ಜಿಲ್ಲೆಗಳಲ್ಲಿ ದಾಖಲೆಯ ಉಷ್ಣಾಂಶ ದಾಖಲಾಗಿದ್ದು, ಜನರು ಮಳೆಯ ನಿರೀಕ್ಷೆಯಲ್ಲಿದ್ದಾರೆ. ತೀವ್ರ ಉಷ್ಣಾಂಶ ದಾಖಲಾಗಿರುವುದರಿಂದ ಕೂಲಿ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ