ರಾಜ್ಯದಲ್ಲಿ ತಗ್ಗಿದ ಮಳೆ ಅಬ್ಬರ: ಆಗಸ್ಟ್ 7ರವರೆಗೆ ಈ ಪ್ರದರ್ಶಗಳಲ್ಲಿ ಸುರಿಯಲಿದೆ ಮಳೆ - Mahanayaka
10:41 AM Thursday 23 - October 2025

ರಾಜ್ಯದಲ್ಲಿ ತಗ್ಗಿದ ಮಳೆ ಅಬ್ಬರ: ಆಗಸ್ಟ್ 7ರವರೆಗೆ ಈ ಪ್ರದರ್ಶಗಳಲ್ಲಿ ಸುರಿಯಲಿದೆ ಮಳೆ

rain
01/08/2025

ಬೆಂಗಳೂರು: ರಾಜ್ಯಾದ್ಯಂತ ಮಳೆ(Rain) ಅಬ್ಬರ ಕಡಿಮೆಯಾಗಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 7ರ ವರೆಗೂ ಮಳೆ ಬೀಳಲಿದೆ ಎಂದು ಹವಾಮಾನ(Weather) ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸ್ವಲ್ಪ ಹೆಚ್ಚಿನ ಮಳೆಯಾಗಲಿದೆ. ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ವಿಜಯನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಧರ್ಮಸ್ಥಳ, ಬೆಳ್ತಂಗಡಿ, ಉಡುಪಿ, ಸುಳ್ಯ, ಪುತ್ತೂರು, ಕೊಟ್ಟಿಗೆಹಾರ, ಕೊಪ್ಪ, ಕಾರ್ಕಳ ಕಮ್ಮರಡಿ, ಕದ್ರಾ, ಹೊನ್ನಾವರ, ಭಾಗಮಂಡಲ, ಆಗುಂಬೆ, ಸಿದ್ದಾಪುರ, ಮೂಡುಬಿದಿರೆ, ಗೇರುಸೊಪ್ಪ, ಶೃಂಗೇರಿ, ಸೋಮವಾರಪೇಟೆ, ಪೊನ್ನಂಪೇಟೆ, ನಾಪೋಕ್ಲು, ಲೋಂಡಾ ಹಾಗೂ ಕಳಸದಲ್ಲಿ ಶುಕ್ರವಾರ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದೆ, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ