ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆ - Mahanayaka

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆ

rain
10/07/2023

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮಳೆಯ ಅಬ್ಬರ ಕಡಿಮೆಯಾಗಿದೆ. ರವಿವಾರ ಸಾಧಾರಣ ಮಳೆ ಸುರಿದಿತ್ತು. ಕೆಲವು ದಿನಗಳಿಂದ ಕಣ್ಮರೆಯಾಗಿದ್ದ  ಬಿಸಿಲು ಮಂಗಳೂರು ಸೇರಿದಂತೆ ಜಿಲ್ಲೆಯಲ್ಲಿ ಇಂದು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ 24 ಗಂಟೆಯ ಅವಧಿಯಲ್ಲಿ 56 ಮಿ.ಮೀ ಮಳೆಯಾಗಿದೆ. ಇದು ವಾಡಿಕೆ ಮಳೆಗಿಂತ ಜಾಸ್ತಿಯಾಗಿತ್ತು. (36.7 ಮಿ.ಮೀ)

ಕಳೆದ ಎಪ್ರಿಲ್‌ ನಿಂದ ಜು 9ರ ತನಕ 1,071.5 ಮಿ.ಮೀ ಮಳೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮಳೆಯ ಪ್ರಮಾಣ ಕಡಿಮೆ. ಈ ಅವಧಿಯಲ್ಲಿ ಕಳೆದ ವರ್ಷ 1,522.2 ಮಳೆಯಾಗಿತ್ತು.

ಮಳೆಯಿಂದಾಗಿ ಈವರೆಗೆ 5 ಮಂದಿ ಸಾವಿಗೀಡಾಗಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಓರ್ವ ಬಲಿಯಾಗಿದ್ದಾನೆ. 4 ಮಂದಿಗೆ ಗಾಯವಾಗಿದೆ. ಒಂದು ಮನೆಗೆ ಭಾಗಶಃ ಹಾನಿಯಾಗಿದೆ.

24 ಗಂಟೆಗಳ ಅವಧಿಯಲ್ಲಿ ಮೆಸ್ಕಾಂನ 26 ಕಂಬಗಳು ಮುರಿದಿದ್ದು, 1.4 ಕಿ.ಮೀ ಲೈನಿಗೆ ಹಾನಿಯಾಗಿವೆ. ಈ ತನಕ 2,107 ಕಂಬಳು, 48 ಟ್ರಾನ್ಸ್‌ಫಾರ್ಮರ್, 79.54 ಕಿ.ಮೀ ಲೈನಿಗೆ ಹಾನಿಯಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 12 ಸೇತುವೆ, 3,545 ಕಿ.ಮೀ ಎಂಡಿಆರ್‌ ರಸ್ತೆ, 7,485 ಎಸ್‌ ಎಚ್ ರಸ್ತೆಗೆ ಹಾನಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ