ಮತ್ತೆ ಅಬ್ಬರಿಸಲಿದೆ ಮಳೆ:  ಹೀಗಿದೆ ಹವಾಮಾನ ವರದಿ - Mahanayaka

ಮತ್ತೆ ಅಬ್ಬರಿಸಲಿದೆ ಮಳೆ:  ಹೀಗಿದೆ ಹವಾಮಾನ ವರದಿ

rain
21/06/2025


Provided by

ಬೆಂಗಳೂರು: ವಾರಕ್ಕೂ ಮೊದಲೇ ಮುಂಗಾರು  ರಾಜ್ಯ ಪ್ರವೇಶಿಸಿದ ಬಳಿಕ ಜೂನ್ ತಿಂಗಳ ಆರಂಭದಿಂದಲೂ ಅಬ್ಬರದ ಮಳೆಯಾಗ್ತಿದೆ. ಕೆಲ ದಿನಗಳ ಬಿಡುವಿನ ನಂತರ ರಾಜ್ಯದಲ್ಲಿ ಮತ್ತೆ ಮಳೆ ಬಿರುಸುಗೊಳ್ಳಲಿದೆ. ರಾಜ್ಯದ ಕೆಲ ಭಾಗಗಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ. 48 ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮತ್ತು ಬಿರುಗಾಳಿ ಬೀಸುವ ಬಗ್ಗೆ ಭಾರತ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ದಕ್ಷಿಣ ಭಾರತದ ಕೇರಳ, ಕರಾವಳಿ ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ರಾಯಲಸೀಮಾದಲ್ಲಿ ಗಂಟೆಗೆ 60 ಕಿ.ಮೀ ವೇಗ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಗಾರು ಮಳೆಯ ಅಬ್ಬರಕ್ಕೆ ರಾಜ್ಯದ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿದೆ. ದಕ್ಷಿಣ ಕನ್ನಡ ಭಾಗದಲ್ಲಿ ಅಪಾಯದ ಮಟ್ಟ ಮೀರಿ ನದಿಗಳು ಹರಿಯುತ್ತಿರುವ ಹಿನ್ನೆಲೆ ನದಿಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಕಳೆದ ವರ್ಷಕ್ಕಿಂದ 2 ಪಟ್ಟು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಭೂ ಕುಸಿತ ಭೀತಿ ಕೂಡ ಹೆಚ್ಚಾಗಿದೆ. ಹಲವು ಅನಾಹುತ ಸಂಭವಿಸಿದೆ. ಹಲವು ಮನೆಗಳು ನೆಲಕಚ್ಚಿವೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ