ಮಳೆಯ ಆರ್ಭಟ: ಮಂಗಳೂರು ಸಮುದ್ರ ತೀರದಲ್ಲಿ ಹೈಅಲರ್ಟ್, ಉಡುಪಿಯಲ್ಲಿ ಸಮುದ್ರ ಪ್ರಕ್ಷುಬ್ದ

sea
21/05/2024

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದಿದೆ. ಭಾರೀ ಗಾಳಿ, ಗುಡುಗು ಮಳೆಗೆ ಜನ ಕಂಗಾಲಾಗಿದ್ದಾರೆ. ಇನ್ನೊಂದೆಡೆ ತುಂತುರು ಮಳೆಗೆ ಶಾಲೆಯ ಕಾಂಪೌಂಡ್ ಕುಸಿದು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ದ.ಕ ಜಿಲ್ಲೆ ಉಳ್ಳಾಲ ತಾಲೂಕಿ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. 7 ವರ್ಷದ ಶಾಜಿಯಾ ಎಂಬ ವಿದ್ಯಾರ್ಥಿನಿ ಶಾಲೆಯ ಗೇಟಿನ ಬಳಿ ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಬಂಗಾಳ ಕೊಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಸಮುದ್ರ ತೀರದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿಯುದ್ದಕ್ಕೂ ಬಿರುಗಾಳಿ ಬೀಸುವ ಸಾಧ್ಯತೆ ಹಿನ್ನಲೆ ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಲಾಗಿದೆ.

ಮಂಗಳೂರಿನಲ್ಲಿ ಇಂದು ಕೂಡ ಧಾರಾಕಾರ ಮಳೆ ಸುರಿಯುವ ಮುನ್ಸೂಚನೆ ಇದೆ. ಇಂದಿನಿಂದ 2 ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಘಿದೆ.

ಇನ್ನೂ ಉಡುಪಿಯಲ್ಲಿ ಸಮುದ್ರ ಪ್ರಕ್ಷುಬ್ದವಾಗಿದೆ. ಉರಿ ಬಿಸಿಲಿನ ನಡುವೆ ಮೋಡದ ವಾತಾವರಣವಿದೆ. ಈ ವಾರದಲ್ಲಿ ಗುಡುಗು ಸಿಡಿಲು ಮಳೆಯ ಮುನ್ನೆಚ್ಚರಿಕೆಯನ್ನ ಜಿಲ್ಲಾಡಳಿತ ನೀಡಿದೆ. ಭಾರೀ ಗಾತ್ರದ ಸಮುದ್ರದಲೆಗಳು ದಡಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಮೀನುಗಾರರು ಹಾಗೂ ಪ್ರವಾಸಿಗರು ಸಮುದ್ರಕ್ಕಿಳಿಯಬಾರದು  ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ

Exit mobile version