ರೈತರ ಪ್ರತಿಭಟನೆಯಿಂದ ಹಿಂದೆ ಸರಿದ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ - Mahanayaka

ರೈತರ ಪ್ರತಿಭಟನೆಯಿಂದ ಹಿಂದೆ ಸರಿದ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ

27/01/2021

ನವದೆಹಲಿ: ಗಣರಾಜ್ಯೋತ್ಸವ ದಿನದಂದು ರೈತರು ನಡೆಸಿದ ಟ್ರ್ಯಾಕ್ಟರ್ ಪರೇಡ್ ಸಂದರ್ಭದಲ್ಲಿ  ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ  ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯು ಪ್ರತಿಭಟನೆಯಿಂದ ಹಿಂದಕ್ಕೆ ಸರಿದಿದೆ.


Provided by

ಬೇರೆಯವರ ನಿರ್ದೇಶನದ ಮೇರೆಗೆ ಪ್ರತಿಭಟನೆಯನ್ನು ಮುಂದುವರಿಸಲು ಸಾಧ್ಯವಿಲ್ಲ. ನಾವು ಅವರಿಗೆ ಶುಭ ಹಾರೈಸುತ್ತೇವೆ. ಆದರೆ ಸರ್ದಾರ್ ವಿಎಂ ಸಿಂಗ್ ಮತ್ತು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಪ್ರತಿಭಟನೆಯಿಂದ ಹಿಂದಕ್ಕೆ ಸರಿಯುವುದಾಗಿ ಅವರು ತಿಳಿಸಿದ್ದಾರೆ.

ಇನ್ನೂ ಟ್ರ್ಯಾಕ್ಟರ್ ಪರೇಡ್ ಗೆ ಸಂಬಂಧಿಸಿದಂತೆ ಈವರೆಗೆ ದೆಹಲಿ ಪೊಲೀಸರು 22 ಎಫ್ ಐಆರ್ ಗಳನ್ನು ದಾಖಲಿಸಿದ್ದಾರೆ. ನಿನ್ನೆ ನಡೆದ ಸಂಘರ್ಷದಲ್ಲಿ  300ಕ್ಕೂ ಅಧಿಕ ಪೊಲೀಸರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ