ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್! - Mahanayaka

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್!

07/12/2020

ಕೋಲಾರ: ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ, ಗೌರವಯುತವಾಗಿ ನಾನು ಸಕ್ರಿಯ ರಾಜಕಾರಣದಿಂದ ನಿವೃತ್ತನಾಗುತ್ತೇನೆ ಎಂದು ಕಾಂಗ್ರೆಸ್ ಶಾಸಕ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಘೋಷಿಸಿದ್ದಾರೆ.

ಕೋಲಾರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.


ನಾನು ನ್ಯಾಯಯುತವಾಗಿ ಇಷ್ಟು ವರ್ಷ ರಾಜಕೀಯ ಮಾಡಿದ್ದೇನೆ. ಹಣಪಡೆದು ರಾಜಕೀಯ ಮಾಡಿಲ್ಲ, ರಾಜ್ಯ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿ ಕುಂಠಿತವಾಗಿದೆ ಎಂದು ಅವರು ಹೇಳಿದ್ದು, ಮಾಸಾಶನ ಫಲಾನುಭವಿಗಳಿಗೆ ಪಿಂಚಣಿ ಸಿಗುತ್ತಿಲ್ಲ, ಬಡವರಿಗೆ ಸಿಗುತ್ತಿದ್ದ ಅನ್ನಭಾಗ್ಯ ಯೋಜನೆ ಅಕ್ಕಿಯನ್ನು ಕೂಡ ಕಡಿತ ಮಾಡಲಾಗಿದೆ ಎಂದು ಅವರು ಹೇಳಿದರು.

ಗ್ರಾಮಮಟ್ಟದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಬೇಕು. ಈ ಕಾರಣಕ್ಕಾಗಿ ನಾನು ಗ್ರಾಮಪಂಚಾಯತ್ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದೇನೆ ಎಂದು ರಮೇಶ್ ಕುಮಾರ್ ಹೇಳಿದರು.

ಇತ್ತೀಚಿನ ಸುದ್ದಿ