ರಕ್ತದ ಒತ್ತಡದಲ್ಲಿ ಯಾವುದೇ ಬದಲಾವಣೆ ಆಗಿಲ್ಲ | ಆಸ್ಪತ್ರೆ ಹೆಲ್ತ್ ಬುಲೆಟಿನ್ ನಲ್ಲಿ ಏನಿದೆ? - Mahanayaka

ರಕ್ತದ ಒತ್ತಡದಲ್ಲಿ ಯಾವುದೇ ಬದಲಾವಣೆ ಆಗಿಲ್ಲ | ಆಸ್ಪತ್ರೆ ಹೆಲ್ತ್ ಬುಲೆಟಿನ್ ನಲ್ಲಿ ಏನಿದೆ?

26/12/2020


Provided by

ಚೆನ್ನೈ: ಅನಾರೋಗ್ಯದ ಹಿನ್ನೆಲೆಯಲ್ಲಿ ಶುಕ್ರವಾರ ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಸೂಪರ್ ಸ್ಟಾರ್ ರಜನಿಕಾಂತ್ ಅವರ ರಕ್ತದೊತ್ತಡದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೈದರಾಬಾದ್ ಅಪೊಲೋ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ರಜನಿಕಾಂತ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೇಳಿರುವ ಆಸ್ಪತ್ರೆ, ರಕ್ತದ ಒತ್ತಡದಲ್ಲಿ ಇನ್ನೂ ಬದಲಾವಣೆ ಕಂಡು ಬಂದಿಲ್ಲ.  ರಕ್ತದ ಒತ್ತಡ ನಿಯಂತ್ರಿಸಲು  ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.  ಖ್ಯಾತ ವೈದ್ಯರ ತಂಡ ರಜನಿಕಾಂತ್ ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದೆ.

ರಕ್ತದೊತ್ತಡದ ಹಿನ್ನೆಲೆಯಲ್ಲಿ ಅವರ ಸಂದರ್ಶನಕ್ಕೆ ಯಾರಿಗೂ ಅವಕಾಶ ನೀಡಲಾಗಿಲ್ಲ ಎಂದು ಆಸ್ಪತ್ರೆ ಹೇಳಿದೆ. ಅಲ್ಲದೇ ನಿನ್ನೆಗಿಂತ ಇಂದು ರಕ್ತದ ಒತ್ತಡದಲ್ಲಿ ಸ್ವಲ್ಪ ಪ್ರಮಾಣ ಕಡಿಮೆಯಾಗಿದೆ ಎಂದೂ ಆಸ್ಪತ್ರೆಗೆ ಹೇಳಿದೆ.  ಸುಸ್ತು ರಕ್ತದ ಒತ್ತಡ ಬಿಟ್ಟರೆ ಅವರಿಗೆ ಬೇರೆ ಯಾವುದೇ ಸಮಸ್ಯೆಗಳಿಲ್ಲ ಎಂದು ಆಸ್ಪತ್ರೆ ತಿಳಿದೆ.

ಇತ್ತೀಚಿನ ಸುದ್ದಿ