ಕೊರೊನಾ ವೈರಸ್ ಗೆ ಬಿಜೆಪಿ ಶಾಸಕಿ ಬಲಿ - Mahanayaka

ಕೊರೊನಾ ವೈರಸ್ ಗೆ ಬಿಜೆಪಿ ಶಾಸಕಿ ಬಲಿ

30/11/2020

ಜೈಪುರ: ಕೊವಿಡ್ 19 ಸೋಂಕಿನಿಂದ ರಾಜಸ್ಥಾನದ ಬಿಜೆಪಿ ಶಾಸಕಿ ಕಿರಣ್ ಮಹೇಶ್ವರಿ ಭಾನುವಾರ ರಾತ್ರಿ ಸಾವನ್ನಪ್ಪಿದ್ದು, ಪ್ರಧಾನಿ ಮೋದಿ ಸಹಿತ ಹಲವಾರು ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ.

 ಹರ್ಯಾಣದ ಗುರುಗ್ರಾಮ್ ನ ಮೇದಾಂತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾಸಕಿ ಮಹೇಶ್ವರಿ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.


Provided by

ಕಿರಣ್ ಮಹೇಶ್ವರಿ ಅವರು 2004ರಿಂದ 2009ರವರೆಗೆ ರಾಜಸ್ಥಾನದ ಉದಯ್ ಪುರ್ ಲೋಕಸಭಾ ಕ್ಷೇತ್ರದ ಸಂಸದೆಯಾಗಿ ಕಾರ್ಯನಿರ್ವಹಿಸಿದ್ದರು.

ಇವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ