ಶಸ್ತ್ರಚಿಕಿತ್ಸೆಯ ನಂತರ ಮಹಿಳಾ ಅಧಿಕಾರಿ ಸಾವು: ವೈದ್ಯರ ನಿರ್ಲಕ್ಷ್ಯದ ಆರೋಪ - Mahanayaka

ಶಸ್ತ್ರಚಿಕಿತ್ಸೆಯ ನಂತರ ಮಹಿಳಾ ಅಧಿಕಾರಿ ಸಾವು: ವೈದ್ಯರ ನಿರ್ಲಕ್ಷ್ಯದ ಆರೋಪ

19/09/2024

ಜೋಧಪುರದ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ಎರಡು ವಾರಗಳ ನಂತರ ರಾಜಸ್ಥಾನ ಆಡಳಿತ ಸೇವೆ ಅಧಿಕಾರಿ ಪ್ರಿಯಾಂಕಾ ಬಿಷ್ಣೋಯ್ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಾವಿನ ತನಿಖೆಗೆ ಆದೇಶಿಸಲಾಗಿದೆ. ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ಮೇಲೆ ವೈದ್ಯಕೀಯ ನಿರ್ಲಕ್ಷ್ಯದ ಆರೋಪ ಹೊರಿಸಲಾಗಿದೆ.

ಜೋಧ್ ಪುರದಲ್ಲಿ ಸಹಾಯಕ ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ 2016 ರ ಬ್ಯಾಚ್‌ನ ಆರ್ ಎಎಸ್ ಅಧಿಕಾರಿ ಬಿಷ್ಣೋಯ್ ಅವರು ವಸುಂಧರಾ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಅವರ ಸ್ಥಿತಿ ಹದಗೆಟ್ಟಿತ್ತು. ಹೀಗಾಗಿ ಆಕೆಯ ಕುಟುಂಬವು ಅವರನ್ನು ಅಹಮದಾಬಾದ್‌ನ ಸಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಿತು. ಆದ್ರೆ ಅಲ್ಲಿ ಅವರು ಬುಧವಾರ ರಾತ್ರಿ ನಿಧನರಾದರು. ಅವರ ಸಾವು ಸಾಮಾಜಿಕ ಮಾಧ್ಯಮದಲ್ಲಿ ಬಹಳ ಚರ್ಚೆಯನ್ನುಂಟು ಮಾಡಿತು.

ಅನೇಕರು ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಇವರ ಸಾವಿನ ನಂತರ, ಜಿಲ್ಲಾಧಿಕಾರಿ ಗೌರವ್ ಅಗರ್ವಾಲ್ ಅವರು ಡಾ.ಎಸ್.ಎನ್.ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಿಗೆ ಖಾಸಗಿ ಆಸ್ಪತ್ರೆಯ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಸೂಚನೆ ನೀಡಿದರು. ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಸಂತಾಪ ವ್ಯಕ್ತಪಡಿಸಿದ್ದು, ಬಿಷ್ಣೋಯ್ ಸಮುದಾಯದ ಮುಖಂಡ ದೇವೇಂದ್ರ ಬುಧಿಯಾ ಈ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ