ಪರೀಕ್ಷೆಗೆ ಸರಿಯಾಗಿ ಓದಿಲ್ಲ ಎಂದು 17 ವರ್ಷದ ಮಗಳನ್ನು ಕೊಂದ ಪಾಪಿ ತಂದೆ! - Mahanayaka

ಪರೀಕ್ಷೆಗೆ ಸರಿಯಾಗಿ ಓದಿಲ್ಲ ಎಂದು 17 ವರ್ಷದ ಮಗಳನ್ನು ಕೊಂದ ಪಾಪಿ ತಂದೆ!

jaipur
06/04/2024

ಜೈಪುರ:  ಮಗಳು ಪರೀಕ್ಷೆಗೆ ಸರಿಯಾಗಿ ಓದಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ಮಗಳನ್ನು ಥಳಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ನಡೆದಿದ್ದು, ಈ ಘಟನೆ ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ.

ಪ್ರೇಮ್ ನಗರದ ನಿವಾಸಿ ಫತೇ ಮೊಹಮ್ಮದ್ (42) ಎಂಬಾತ ತನ್ನ ಮಗಳನ್ನೇ ಹತ್ಯೆಗೈದಿರುವ ಆರೋಪಿಯಾಗಿದ್ದಾನೆ. ಘಟನೆಯ ನಂತರ ಶನಿವಾರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

11ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ತನ್ನ ಮಗಳು ಪರೀಕ್ಷೆಗೆ ಓದುತ್ತಿಲ್ಲ ಎಂಬ ಆಕ್ರೋಶದಿಂದ ಥಳಿಸಿಕೊಂದಿರುವುದಾಗಿ ಆರೋಪಿ ಫತೇ ಮೊಹಮ್ಮದ್ ಪೊಲೀಸರ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.


Provided by

17 ವರ್ಷ ವಯಸ್ಸಿನ ಮಗಳು ಪರೀಕ್ಷೆಗೆ ಸರಿಯಾಗಿ ತಯಾರಿ ನಡೆಸಿಲ್ಲ ಎಂಬ ಕಾರಣಕ್ಕೆ ಕೋಪಗೊಂಡಿದ್ದ ಮೊಹಮ್ಮದ್ ದೊಣ್ಣೆಯಿಂದ ಅಮಾನವೀಯವಾಗಿ ಥಳಿಸಿ ಹತ್ಯೆ ನಡೆಸಿರುವ ಬಗ್ಗೆ ಬಾಲಕಿಯ ಚಿಕ್ಕಪ್ಪ ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನನ್ವಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಕೃತ್ಯಕ್ಕೆ ಬಳಸಿರುವ ಮಾರಕಾಸ್ತ್ರವನ್ನೂ ವಶಕ್ಕೆ ಪಡೆದುಕೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ