ಬುಡಕಟ್ಟು ಜನರನ್ನು ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ ಆರೋಪ: ರಾಜಸ್ಥಾನ ಸಚಿವನಿಗೆ ಜೀವ ಬೆದರಿಕೆ

ರಾಜಸ್ಥಾನದ ಕ್ಯಾಬಿನೆಟ್ ಸಚಿವ ಬಾಬುಲಾಲ್ ಖರಾಡಿ ಅವರಿಗೆ ಸಾಮಾಜಿಕ ಮಾಧ್ಯಮದ ಮೂಲಕ ಕೊಲೆ ಬೆದರಿಕೆ ಹಾಕಿದ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೂರು ದಿನಗಳ ಹಿಂದೆ ಅವರ ಇನ್ಸ್ಟಾಗ್ರಾಮ್ ಖಾತೆಯ ಕಾಮೆಂಟ್ ವಿಭಾಗದಲ್ಲಿ ಅವರಿಗೆ ಬೆದರಿಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
“ರಾಜಕೀಯ ಮುಂದುವರಿಯುತ್ತದೆ. ಆದರೆ ನೀವು ಮೊದಲು ಕೊಲ್ಲಲ್ಪಡುತ್ತೀರಿ” ಎಂಬ ಕಮೆಂಟ್ ಭೀಕರ ಪರಿಣಾಮಗಳ ಬಗ್ಗೆ ಎಚ್ಚರಿಸಿತ್ತು. ಲೋಕಸಭಾ ಚುನಾವಣೆಗೂ ಮುನ್ನ ನಿಮ್ಮ ಫಲಿತಾಂಶ ಹೊರಬೀಳಲಿದೆ ಎಂದು ಬೆದರಿಸಲಾಗಿತ್ತು.
ಬುಡಕಟ್ಟು ಪ್ರದೇಶ ಅಭಿವೃದ್ಧಿ ಖಾತೆಯನ್ನು ಹೊಂದಿರುವ ಖರಾಡಿ ಬುಡಕಟ್ಟು ಜನಾಂಗದವರ ಮೇಲೆ ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಅಪರಿಚಿತ ವ್ಯಕ್ತಿ ಆರೋಪಿಸಿದ್ದಾರೆ.
ಈ ಕಮೆಂಟನ್ನು ಬಾಬುಲಾಲ್ ಖರಾಡಿ ಅವರ ಮಗ ಓದಿ ನಂತರ ಅವರು ಸಚಿವರಿಗೆ ಮಾಹಿತಿ ನೀಡಿದ್ದರು. ಅವರು ಪೊಲೀಸ್ ಮತ್ತು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರು.
ಸಚಿವರಿಗೆ ಬೆದರಿಕೆ ಕಮೆಂಟ್ ಅನ್ನು ಪೋಸ್ಟ್ ಮಾಡಲು ಬಳಸಿದ ಐಪಿ ವಿಳಾಸವನ್ನು ಪತ್ತೆಹಚ್ಚಲು ತನಿಖಾ ಸಂಸ್ಥೆಗಳು ಹಗಲಿರುಳು ಶ್ರಮಿಸುತ್ತಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಇಂಡಿಯಾ ಟುಡೇಗೆ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth