ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ: ಇಬ್ಬರು ಪೊಲೀಸರನ್ನು ಅಮಾನತುಗೊಳಿಸಿದ ರಾಜಸ್ಥಾನ ಪೊಲೀಸ್ ಇಲಾಖೆ - Mahanayaka
1:52 AM Tuesday 27 - February 2024

ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ: ಇಬ್ಬರು ಪೊಲೀಸರನ್ನು ಅಮಾನತುಗೊಳಿಸಿದ ರಾಜಸ್ಥಾನ ಪೊಲೀಸ್ ಇಲಾಖೆ

06/12/2023

ರಾಷ್ಟ್ರೀಯ ರಜಪೂತ್ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೋಗಮೇಡಿ ಅವರನ್ನು ಜೈಪುರದಲ್ಲಿ ಮೂವರು ಗುಂಡಿಕ್ಕಿ ಕೊಂದ ಒಂದು ದಿನದ ನಂತರ ರಾಜಸ್ಥಾನದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ರಾಜಸ್ಥಾನ ಪೊಲೀಸರು ಸ್ಟೇಷನ್ ಹೌಸ್ ಆಫೀಸರ್ ಮನೀಶ್ ಗುಪ್ತಾ ಮತ್ತು ಕಾನ್ಸ್ ಟೇಬಲ್ ಮಹೇಶ್ ಅವರನ್ನು ಅಮಾನತುಗೊಳಿಸಲಾಗಿದೆ.
ಗೋಗಮೇಡಿ ಅವರನ್ನು ಮಂಗಳವಾರ ಅವರ ಮನೆಯೊಳಗೆ ಗುಂಡಿಕ್ಕಿ ಕೊಲ್ಲಲಾಯಿತು. ಘಟನೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ, ದಾಳಿಕೋರರು ತಮ್ಮ ಶಸ್ತ್ರಾಸ್ತ್ರಗಳನ್ನು ಹೊರತೆಗೆದು ಮನೆಯ ಎದುರಿನ ಮಂಚದ ಮೇಲೆ ಕುಳಿತಿದ್ದ ಗೋಗಮೇಡಿ ಮೇಲೆ ಎರ್ರಾಬಿರ್ರಿಯಾಗಿ ಗುಂಡು ಹಾರಿಸುತ್ತಿರುವುದು ಕಂಡುಬಂದಿದೆ.

ಇಬ್ಬರು ಆರೋಪಿಗಳನ್ನು ಮಕ್ರಾನಾ ನಾಗೌರ್ ನಿವಾಸಿ ರೋಹಿತ್ ರಾಥೋಡ್ ಮತ್ತು ಹರಿಯಾಣದ ಮಹೇಂದ್ರಗತ್ ನಿವಾಸಿ ನಿತಿನ್ ಫೌಜಿ ಎಂದು ಗುರುತಿಸಲಾಗಿದೆ.
ರಾಷ್ಟ್ರೀಯ ರಜಪೂತ್ ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೋಗಮೇಡಿ ಅವರ ಹತ್ಯೆಯನ್ನು ಖಂಡಿಸಿ ಭೋಪಾಲ್, ಇಂದೋರ್ ಮತ್ತು ಜಬಲ್ಪುರ ಸೇರಿದಂತೆ ಮಧ್ಯಪ್ರದೇಶದ ಹಲವಾರು ನಗರಗಳಲ್ಲಿ ಪ್ರತಿಭಟನೆ ನಡೆಸಲಾಯಿತು.

ಗೋಗಮೇಡಿ ಹತ್ಯೆಯಲ್ಲಿ ಭಾಗಿಯಾಗಿರುವ ಹಂತಕರನ್ನು ಎನ್ ಕೌಂಟರ್ ನಲ್ಲಿ ಕೊಲ್ಲಬೇಕೆಂದು ಒತ್ತಾಯಿಸಿ ಭೋಪಾಲ್‌ನ ರಾಷ್ಟ್ರೀಯ ರಜಪೂತ್ ಕರ್ಣಿ ಸೇನಾ ಕಾರ್ಯಕರ್ತರು ಎಂಪಿ ನಗರದ ಜ್ಯೋತಿ ಟಾಕೀಸ್ ಚೌಕದಲ್ಲಿ ರಸ್ತೆ ತಡೆ ನಡೆಸಿದರು. ಪ್ರತಿಭಟನಾಕಾರರು ರಸ್ತೆಯಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ, ರಸ್ತೆಗಳಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದರು.

ಇತ್ತೀಚಿನ ಸುದ್ದಿ