ಮತ್ತೆ ಕನಸು ಭಗ್ನ: ರಾಜಸ್ಥಾನದ ಎದುರು ಸೋತು ಐಪಿಎಲ್ ಟೂರ್ನಿಯಿಂದ ಆರ್ ಸಿಬಿ ‘ಔಟ್’

23/05/2024

ಐಪಿಎಲ್‌ನ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನದ ವಿರುದ್ಧ ಸೋಲನುಭವಿಸಿದೆ. ಇದರೊಂದಿಗೆ ಆರ್‌ಸಿಬಿ ತಂಡ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದ ರಾಜಸ್ಥಾನ ರಾಯಲ್ಸ್ ತಂಡವು ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 172 ರನ್‌ ಗಳಿಸಲಷ್ಟೇ ಶಕ್ತವಾಯಿತು. ಈ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ ತಂಡವು 19 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 174 ರನ್‌ ಗಳಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತ ನೀಡಿತು. ಬೆಂಗಳೂರು ಪರ ಪಾಟೀದಾರ್‌ 34, ಕೊಹ್ಲಿ 32, ಮಹಿಪಾಲ್‌ 32 ರನ್‌ ಹೊಡೆದು ಗಮನ ಸೆಳೆದರು. ರಾಜಸ್ಥಾನ ಪರ ಅವೇಶ್‌ ಖಾನ್‌ 3, ಅಶ್ವಿನ್‌ 2 ವಿಕೆಟ್‌ ಪಡೆದರು. ಐಪಿಎಲ್ ನ ಈ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿ ಕ್ವಾಲಿಫೈಯರ್-2 ಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಇತ್ತ ಸತತ ಆರು ಪಂದ್ಯಗಳನ್ನು ಗೆಲ್ಲುವ ಮೂಲಕ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದ್ದ ಆರ್​ಸಿಬಿ ಈ ಸಲದ ಐಪಿಎಲ್ ಪಯಣ ಇಲ್ಲಿಗೆ ಅಂತ್ಯಗೊಂಡಿದೆ.
ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿ ಕ್ವಾಲಿಫೈಯರ್-2 ಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಇತ್ತ ಸತತ ಆರು ಪಂದ್ಯಗಳನ್ನು ಗೆಲ್ಲುವ ಮೂಲಕ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದ್ದ ಆರ್​ಸಿಬಿ ಪಯಣ ಇಲ್ಲಿಗೆ ಅಂತ್ಯಗೊಂಡಿದೆ. ಕ್ವಾಲಿಫೈಯರ್-2 ತಲುಪಿರುವ ರಾಜಸ್ಥಾನ ತಂಡ ಇದೀಗ ಮೇ 24 ರಂದು ಮತ್ತೊಂದು ನಾಕೌಟ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಆ ಪಂದ್ಯದಲ್ಲಿ ಗೆಲ್ಲುವ ತಂಡ ಮೇ 26 ರಂದು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಫೈನಲ್‌ನಲ್ಲಿ ಆಡಲಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version