ವಾಟ್ಸಾಪ್‌ನಲ್ಲಿ ಗಣೇಶ ಚತುರ್ಥಿ ಶುಭಾಶಯಗಳನ್ನು ಡಿಲೀಟ್ ಮಾಡಿದ ಪ್ರಾಂಶುಪಾಲರ ಬಂಧನ - Mahanayaka

ವಾಟ್ಸಾಪ್‌ನಲ್ಲಿ ಗಣೇಶ ಚತುರ್ಥಿ ಶುಭಾಶಯಗಳನ್ನು ಡಿಲೀಟ್ ಮಾಡಿದ ಪ್ರಾಂಶುಪಾಲರ ಬಂಧನ

08/09/2024


Provided by

ರಾಜಸ್ಥಾನದ ಕೋಟಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಪ್ರಾಂಶುಪಾಲರು ವಾಟ್ಸಾಪ್‌ನಲ್ಲಿ ಗಣೇಶ ಚತುರ್ಥಿಯ ಸಂಭ್ರಮಾಚರಣೆಯ ಕುರಿತು ಹಲವಾರು ಪೋಸ್ಟ್ ಗಳನ್ನು ಡಿಲೀಟ್ ಮಾಡಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿದ ಘಟನೆ ‌ನಡೆದಿದೆ.

ಪೊಲೀಸರ ಪ್ರಕಾರ, ಲಾತೂರಿಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಸಮಿತಿಯು ವಾಟ್ಸಾಪ್ ಗ್ರೂಪ್ ಅನ್ನು ಹೊಂದಿದ್ದು, ಇದರಲ್ಲಿ ಗ್ರಾಮದ ನಿವಾಸಿಗಳೂ ಸೇರಿದ್ದಾರೆ.
ಗ್ರಾಮದ ನಿವಾಸಿಗಳಲ್ಲಿ ಒಬ್ಬರು ಗಣೇಶ ಚತುರ್ಥಿಯ ಸಂದರ್ಭದಲ್ಲಿ ಜನರಿಗೆ ಶುಭಾಶಯ ಕೋರಿ ಶನಿವಾರ ಗುಂಪಿನಲ್ಲಿ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದರು. ಆದರೆ, ಶಾಲೆಯ ಪ್ರಾಂಶುಪಾಲ ಶಾಫಿ ಮೊಹಮ್ಮದ್ ಅನ್ಸಾರಿ ಆ ಸಂದೇಶವನ್ನು ಅಳಿಸಿಹಾಕಿದ್ದರು ಎಂದು ಆರೋಪಿಸಲಾಗಿದೆ.

ಶಿಕ್ಷಕರೊಬ್ಬರು ಸುಮಾರು ಎರಡು ಗಂಟೆಗಳ ನಂತರ ಇದೇ ರೀತಿಯ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ. ಅದನ್ನು ಪ್ರಾಂಶುಪಾಲರು ಸಹ ಅಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅನ್ಸಾರಿಯನ್ನು ವಜಾಗೊಳಿಸಿ ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಪೊಲೀಸರು ಸ್ಥಳಕ್ಕೆ ಧಾವಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಗ್ರಾಮಸ್ಥರು ಪ್ರಾಂಶುಪಾಲರ ವಿರುದ್ಧ ದೂರು ದಾಖಲಿಸಿದ್ದಾರೆ.

ಈ ದೂರಿನ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿ ಪ್ರದೇಶದಲ್ಲಿ ಶಾಂತಿಗೆ ಭಂಗ ತಂದ ಆರೋಪದ ಮೇಲೆ ಅನ್ಸಾರಿಯನ್ನು ಬಂಧಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ