ವಿವಾಹಿತ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ: ಮಹಿಳೆಯ ಅರೆಬೆತ್ತಲೆಯಾಗಿ ಮೆರವಣಿಗೆ ಮಾಡಿದ ಜನರು - Mahanayaka

ವಿವಾಹಿತ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ: ಮಹಿಳೆಯ ಅರೆಬೆತ್ತಲೆಯಾಗಿ ಮೆರವಣಿಗೆ ಮಾಡಿದ ಜನರು

14/04/2024


Provided by

ವಿವಾಹಿತ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಕ್ಕಾಗಿ ಮಹಿಳೆಯನ್ನು ಅರೆಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ. ಸರ್ವಾಡಿ ಗ್ರಾಮದಲ್ಲಿ ನಡೆದ ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದೆ. ಪೊಲೀಸರ ಪ್ರಕಾರ, ವ್ಯಕ್ತಿಯ ಪತ್ನಿ ಮತ್ತು ಕುಟುಂಬ ಸದಸ್ಯರು ವ್ಯಕ್ತಿಯ ಜೊತೆಗೆ ಇರೋ ಸಂಬಂಧದ ಬಗ್ಗೆ ತಿಳಿದುಕೊಂಡಿದ್ದರು.

ವೀಡಿಯೊದಲ್ಲಿ, ಮಹಿಳೆಯೊಬ್ಬಳು ಬೇಡಿಕೊಳ್ಳುವಾಗ ಅರೆಬೆತ್ತಲೆಯಾಗಿರುವ ಸಂತ್ರಸ್ತೆಯನ್ನು ಕೂದಲಿನಿಂದ ಎಳೆದುಕೊಂಡು ಹೋಗುವುದನ್ನು ಕಾಣಬಹುದು.
ಸಂದಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ನಂತರ, ಸಂತ್ರಸ್ತೆ ಕೌನ್ಸೆಲಿಂಗ್ ಪಡೆಯುತ್ತಿದ್ದಾಗ ಇಬ್ಬರು ಮಹಿಳೆಯರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಬಾರ್ಮರ್ನ ಪೊಲೀಸ್ ವರಿಷ್ಠಾಧಿಕಾರಿ ಕುಂದನ್ ಕವಾರಿಯಾ ತಿಳಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ