12:01 AM Wednesday 15 - October 2025

ದಿಢೀರ್ ಬೆಳವಣಿಗೆ: ರಾಜೀನಾಮೆಗೆ ಮುಂದಾದ ಸಚಿವ ಆನಂದ್ ಸಿಂಗ್?

anand singh
11/08/2021

ಬೆಂಗಳೂರು: ಶಾಸಕ ಆನಂದ್ ದಿಢೀರ್ ಬೆಳವಣಿಗೆಯೊಂದರಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಭೇಟಿಗೆ ಸಮಯ ಕೇಳಿದ್ದು, ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಅವರು, ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ಚರ್ಚೆಗೀಡಾಗಿದೆ.

ಮಾಹಿತಿಗಳ ಪ್ರಕಾರ ಇಂದು ಆನಂದ್ ಸಿಂಗ್ ಅವರು  ನಾಲ್ಕು ಗಂಟೆಗಳ ಸುಮಾರಿಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ನಾನು ಬೇಡಿಕೆ ಇಟ್ಟಿರುವ ಖಾತೆಯನ್ನು ನನಗೆ ನೀಡಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಆನಂದ್ ಸಿಂಗ್ ಖಾತೆ ಬದಲಾವಣೆ ಮಾಡದಿದ್ದರೆ, ರಾಜೀನಾಮೆ ನೀಡಬೇಕಾಗುತ್ತದೆ ಎಂದು ನೇರವಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.

ಇದೀಗ ಆನಂದ್ ಸಿಂಗ್ ಗೆ ಇನ್ನಿತರ ಅತೃಪ್ತ ಶಾಸಕರ ಬೆಂಬಲ ಕೂಡ ಲಭ್ಯವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಂದು ರಾಜೀನಾಮೆಯ ಬಗ್ಗೆ ಅಂತಿಮ ನಿರ್ಧಾರವನ್ನು ಕೈಗೊಳ್ಳುವ ಸಾಧ್ಯತೆ ಇದ್ದರೂ ಇರಬಹುದು ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸುದ್ದಿಗಳು…

ನೀರಜ್ ಚೋಪ್ರಾರನ್ನು ಅನುಕರಿಸಿ ರೋಡಲ್ಲಿ ನಿಂತು ಈಟಿ ಎಸೆದ ರಾಖಿ ಸಾವಂತ್ | ಮುಂದೇನಾಯ್ತು?

ಎಸೆಸೆಲ್ಸಿ ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸ್ ನಲ್ಲಿ ಪಾಸ್ ಆಗಿದ್ದ ವಿದ್ಯಾರ್ಥಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶೂಟಿಂಗ್ ವೇಳೆ ನಟ ಪ್ರಕಾಶ್ ರೈಗೆ ಏಟು | ಶಸ್ತ್ರ ಚಿಕಿತ್ಸೆಗೆ ಹೈದರಾಬಾದ್ ಗೆ ಶಿಫ್ಟ್

ಕಾಂಗ್ರೆಸ್ ನವರು ಕುಡುಕ ಸೂ*** ಮಕ್ಕಳು ಎಂದು ಹೇಳಿಕೆ ನೀಡಿದ ಸಚಿವ ಈಶ್ವರಪ್ಪ

ದೇವಸ್ಥಾನದಿಂದ ಬರುತ್ತಿದ್ದ ಮಹಿಳೆಯನ್ನು ಹೊತ್ತೊಯ್ದು ಸಾಮೂಹಿಕ ಅತ್ಯಾಚಾರ!

ಕೇವಲ 11 ನಿಮಿಷ ಮಾತ್ರ ರೇಪ್ ಆಗಿದೆ ಎಂದು ಶಿಕ್ಷೆ ಕಡಿಮೆ ಮಾಡಿ ತೀರ್ಪು ನೀಡಿದ ನ್ಯಾಯಾಧೀಶ!

ಇತ್ತೀಚಿನ ಸುದ್ದಿ

Exit mobile version