8:06 AM Thursday 30 - October 2025

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಮೈಸೂರಿಗೆ ವರ್ಗಾವಣೆ

rajendra kv
21/10/2022

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರನ್ನು ಮೈಸೂರಿಗೆ ವರ್ಗಾವಣೆಗೊಳಿಸಿ ರಾಜ್ಯ ಸರಕಾರ  ಆದೇಶ ಹೊರಡಿಸಿದೆ.

ಸದ್ಯ ದ.ಕ. ಜಿಪಂ ಸಿಇಒ ಆಗಿರುವ ಡಾ.ಕುಮಾರ್ ಅವರಿಗೆ ದ.ಕ.ಜಿಲ್ಲಾಧಿಕಾರಿ ಹುದ್ದೆಯ ಪ್ರಭಾರ ವಹಿಸಲಾಗಿದೆ. ಕೋವಿಡ್ ಹಾವಳಿ, ಲಾಕ್‌ ಡೌನ್ ಮತ್ತು ಮಳೆಹಾನಿಯ ಸಂದರ್ಭ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದ ಡಾ.ರಾಜೇಂದ್ರ ಕೆ.ವಿ. ತನ್ನ ಕೆಲಸ ಕಾರ್ಯಗಳಿಂದ ಅಪಾರ ಜನ್ನಮನ್ನಣೆಗೆ ಪಾತ್ರರಾಗಿದ್ದರು.

ಹೊಸ ಆದೇಶದಂತೆ ಮೈಸೂರು ಜಿಲ್ಲಾಧಿಕಾರಿಯಾಗಿ ಡಾ. ರಾಜೇಂದ್ರ ಕಾರ್ಯನಿರ್ವಹಿಸಲಿದ್ದಾರೆ. ಡಾ.ಕುಮಾರ್ ಅವರು ದ.ಕ.ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಸದ್ಯ ದ.ಕ. ಜಿಪಂ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version