4:24 AM Wednesday 15 - October 2025

ಲೈಂಗಿಕ ದೌರ್ಜನ್ಯ: ಆರೋಪಿ ವಕೀಲ ರಾಜೇಶ್ ಭಟ್ ನನ್ನು ರಕ್ಷಿಸಲು ನಡೆದಿತ್ತು ಭಾರೀ ಷಡ್ಯಂತ್ರ!

rajesh bhat
22/10/2021

ಮಂಗಳೂರು: ವಕೀಲ ರಾಜೇಶ್ ಭಟ್ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸದಂತೆ ಒತ್ತಡ ಹೇರಿರುವ ವಿಚಾರ ಬೆಳಕಿಗೆ ಬಂದಿದ್ದು, ಈ ಸಂಬಂಧ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದ್ದು, ಮಂಗಳೂರು ಮಹಿಳಾ ಜಾಗೃತಿ ವೇದಿಕೆಯ ಅಧ್ಯಕ್ಷೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಮಂಗಳೂರಿನ ಹೈಪ್ರೊಫೈಲ್ ವಕೀಲ ರಾಜೇಶ್ ಭಟ್ (Rajesh Bhat) ವಿರುದ್ಧ ಕಾನೂನು ವಿದ್ಯಾರ್ಥಿನಿ ಲೈಂಗಿಕ ಕಿರುಕುಳದ ದೂರು ನೀಡಿದ್ದಾರೆ. ಸಂತ್ರಸ್ತೆ ಈ ದೂರನ್ನು ನೀಡುವ ಮೊದಲೇ ವಕೀಲ ರಾಜೇಶ್ ಭಟ್, ತಾನೇ ಮೊದಲು ಕೇಸ್ ನೀಡಿದ್ದಾನೆ. ಜೊತೆಗೆ ಕೇಸ್ ಮುಚ್ಚಿ ಹಾಕಲು ಸಾಕಷ್ಟು ಷಡ್ಯಂತ್ರಗಳನ್ನು ನಡೆಸಲಾಗಿದೆ ಎನ್ನುವುದು ವರದಿಗಳಿಂದ ತಿಳಿದು ಬಂದಿದೆ.

ಮಹಿಳಾ ಜನಜಾಗೃತಿ ವೇದಿಕೆ ಎಂಬ ಸಂಘಟನೆಯ ಅಧ್ಯಕ್ಷೆ ಎನ್ನಲಾಗಿರುವ  ಪವಿತ್ರ ಆಚಾರ್ಯ ಎಂಬಾಕೆಯನ್ನು ಕೇಸ್ ಮುಚ್ಚಿ ಹಾಕಲು ರಾಜೇಶ್ ಭಟ್ ಬಳಸಿಕೊಂಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ಪ್ರಕರಣದಲ್ಲಿ ನಾವು ನಿಮಗೆ ಸಹಾಯ ಮಾಡುತ್ತೇವೆ ಎಂಬ ನೆಪದಲ್ಲಿ ಸಂತ್ರಸ್ತೆಯ ಸ್ನೇಹಿತೆಗೆ ಕೌನ್ಸೆಲಿಂಗ್ ನೀಡುವುದಾಗಿ ಕಾರಿನಲ್ಲಿ ಕರೆದೊಯ್ದಿದ್ದ ಪವಿತ್ರ ಆಚಾರ್ಯ, ಮಂಗಳೂರಿನ ನೆಹರೂ ಮೈದಾನಕ್ಕೆ ಕರೆದುಕೊಂಡು ಹೋಗಿ ಆಕೆಯನ್ನು ಬೆದರಿಸಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿದರೆ ಜೀವ ಸಹಿತ ಉಳಿಯೋಕೆ ಆಗಲ್ಲ. ನೀವು ವಕೀಲ ವೃತ್ತಿಯಲ್ಲಿ ಮುಂದುವರಿಯೋಕೆ ಆಗಲ್ಲ. ಪೊಲೀಸರಿಗೆ ದೂರು ನೀಡದೆ ಸುಮ್ಮನಿರಬೇಕು ಎಂದು ಹೇಳಿದ್ದಾಳೆ ಎಂದು ಆರೋಪಿಸಲಾಗಿದೆ.

ಸಂತ್ರಸ್ತೆ ಮತ್ತು ಆರೋಪಿ ವಕೀಲ ರಾಜೇಶ್ ಭಟ್ ಆಡಿಯೋ ಸಂಭಾಷಣೆ ವೈರಲ್ ಆದ ಹಿನ್ನಲೆಯಲ್ಲಿ ಗಾಬರಿಗೊಂಡ ವಕೀಲ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸತತ ಯತ್ನಿಸಿದ್ದ. ಈ ಬಗ್ಗೆ ಸಂತ್ರಸ್ತೆ ದೂರು ನೀಡುವ ಮೊದಲೇ ವಕೀಲ ರಾಜೇಶ್ ಭಟ್, ಉರ್ವ ಠಾಣೆಯಲ್ಲಿ ಸಂತ್ರಸ್ತೆ ಮತ್ತು ಸಂತ್ರಸ್ತೆಯ ಸ್ನೇಹಿತೆಯ ವಿರುದ್ಧ ದೂರು ನೀಡಿದ್ದ. ಈ ಪ್ರಕರಣದಲ್ಲಿ ಸಂತ್ರಸ್ತೆಯ ಸ್ನೇಹಿತೆಯಿಂದ ಪೊಲೀಸರು ಒತ್ತಾಯಪೂರ್ವಕವಾಗಿ ಮುಚ್ಚಳಿಕೆ ಬರೆಸಿ ಕಳುಹಿಸಿದ್ದರು ಎನ್ನಲಾಗಿದೆ.

ಇಷ್ಟೆಲ್ಲಾ ಬೆಳವಣಿಗೆಯಾದರೂ ಉರ್ವ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀಕಲಾ, ಹೆಡ್‌ ಕಾನ್‌ ಸ್ಟೇಬಲ್ ಪ್ರಮೋದ್ ಉನ್ನತ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಾರದೇ, ವಕೀಲನ ಜೊತೆ ಶಾಮೀಲಾದ ಹಿನ್ನಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್, ಇಬ್ಬರನ್ನು ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಅಮಾನತು ಮಾಡಿದ್ದಾರೆ. ಇದರ ಜೊತೆಗೆ ಸಂತ್ರಸ್ತೆಯ ಸ್ನೇಹಿತೆಗೆ ಬೆದರಿಕೆ ಹಾಕಿ ಪ್ರಕರಣ ಮುಚ್ಚಲು ಯತ್ನಿಸಿದ್ದ ಮಂಗಳೂರು ಮಹಿಳಾ ಜಾಗೃತಿ ವೇದಿಕೆಯ ಅಧ್ಯಕ್ಷೆ ಪವಿತ್ರಾ ಆಚಾರ್ಯಳನ್ನೂ ಪೊಲೀಸರು ಬಂಧಿಸಿದ್ದಾರೆ. ಕೇಸ್ ಮುಚ್ಚಿ ಹಾಕಲು ಸಹಕರಿಸಿದ ಸಂತ್ರಸ್ತೆಯ ಗೆಳೆಯ ಧ್ರುವ ಮತ್ತು ಆತನ ತಾಯಿ ಮಹಾಲಕ್ಷ್ಮೀ ಎಂಬುವವರನ್ನೂ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ದಲಿತ ಬಾಲಕಿಯ ಅತ್ಯಾಚಾರ: ಆರೆಸ್ಸೆಸ್ ಮುಖಂಡನ ವಿರುದ್ಧ ದಲಿತ ಸಂಘಟನೆಗಳಿಂದ ಪ್ರತಿಭಟನೆ

ಐವಾನ್ ಡಿಸೋಜಾ ಮನೆಯಿಂದಲೇ ಮತಾಂತರ ಆರಂಭವಾಗಿದೆ | ರಾಜಶೇಖರಾನಂದ ಸ್ವಾಮೀಜಿ ಹೇಳಿಕೆ

ಯಾವ ಸಾಧನೆಗೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ? | ಕೇಂದ್ರ ಸರ್ಕಾರದ ಕಿವಿ ಹಿಂಡಿದ ಸಿದ್ದರಾಮಯ್ಯ

ಜಾನುವಾರುಗಳಿಗೆ ಆಸರೆಯಾಗಿದ್ದ ಸಬ್ ಇನ್ ಸ್ಪೆಕ್ಟರ್ ಮಹಮ್ಮದ್ ರಫೀಕ್ ಹೃದಯಾಘಾತದಿಂದ ನಿಧನ

ಸಂಘ ಸಂಸ್ಕಾರ ಪಡೆದು ಅಶ್ಲೀಲ ದೃಶ್ಯ, ಸಿಡಿ ಸುಳಿಯಲ್ಲಿ ಸಿಲುಕಿದವರು ಯಾರು?… ಸದಾನಂದ ಪರಿವಾರ | ಜೆಡಿಎಸ್ ಕಿಡಿ

ಮಂಗಳೂರಿನ ಸಂಘದ ಪ್ರಚಾರಕರ ಕುಟುಂಬದ ಹೆಣ್ಣು ಮಗಳೊಬ್ಬರನ್ನು ಹಾಳು ಮಾಡಿ ಬಾಂಬೆಗೆ ಓಡಿ ಹೋಗಿದ್ದವರು ಯಾರು? | ಕುಮಾರಸ್ವಾಮಿ ಪ್ರಶ್ನೆ

 

ಇತ್ತೀಚಿನ ಸುದ್ದಿ

Exit mobile version